ಶ್ರೀಲಂಕಾದಲ್ಲಿ ಏಪ್ರಿಲ್ 21ರಂದು ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಅಮಾಯಕರು ಮೃತಪಟ್ಟಿದ್ದು ಇದೀಗ ಮತ್ತೆ ಲಂಕಾದ ಮೂರು ಕಡೆ ಸರಣಿ ಬಾಂಬ್ ಸ್ಫೋಟ...
ಕೊಲಂಬೊ: ಶ್ರೀಲಂಕಾದಲ್ಲಿ ಏಪ್ರಿಲ್ 21ರಂದು ಉಗ್ರರು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 250ಕ್ಕೂ ಹೆಚ್ಚು ಮಂದಿ ಅಮಾಯಕರು ಮೃತಪಟ್ಟಿದ್ದು ಇದೀಗ ಮತ್ತೆ ಲಂಕಾದ ಮೂರು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಶ್ರೀಲಂಕಾದ ಕಾಲ್ ಮುನೈನಗರದಲ್ಲಿ ಇಂದು ಮೂರು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದ್ದು ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಲಂಕಾದಲ್ಲಿ ಮತ್ತೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಕುರಿತು ಲಂಕಾ ಸೇನಾ ವಕ್ತಾರರು ಖಚಿತ ಪಡಿಸಿದ್ದಾರೆ.