ಜಕಾರ್ತ: ಇಂಡೋನೇಷ್ಯಾದ ಸುಮತ್ರಾ ಹಾಗೂ ಜಾವಾ ದ್ವೀಪದಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ ಅದರ ತೀವ್ರತೆ 7 ರಷ್ಟು ದಾಖಲಾಗಿದೆ..ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 7 ರಷ್ಟಿತ್ತು ಎಂದು ಅಮೆರಿಕದ ಭೂ ವಿಜ್ಞಾನ ಸಂಸ್ಥೆ ಮಾಹಿತಿ ನೀಡಿದೆ..ಇಂಡೋನೇಷ್ಯಾದ ಸುಮತ್ರಾ ದ್ವೀಪದಲ್ಲಿ ಭೂಕಂಪ ಕೇಂದ್ರೀಕೃತವಾಗಿತ್ತು. ಸಮುದ್ರದ 10 ಅಡಿ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಮೆರಿಕದ ಭೂ ವಿಜ್ಞಾನ ಸಂಸ್ಥೆ ತಿಳಿಸಿದೆ..ಸ್ಥಳೀಯ ಹವಾಮಾನ ಇಲಾಖೆ ಸುನಾಮಿ ಅಪಾಯದ ಬಗ್ಗೆ ಜನರಿಗೆ ಮುನ್ನೆಚ್ಚರಿಕೆ ನೀಡಿದೆ..ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಆಸ್ತಿಪಾಸ್ತಿ ಹಾನಿಯಾಗಿಲ್ಲ ಎನ್ನಲಾಗಿದೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos