ಭಾರತಕ್ಕೆ ಸಿಹಿ ಸುದ್ದಿ: ಮುಂಬೈ ಸ್ಫೋಟದ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ತಪ್ಪಿತಸ್ಥ, ಪಾಕ್ ಕೋರ್ಟ್

ಭಯೋತ್ಪಾದನಾ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಉಗ್ರ, ಮುಂಬೈ ಸ್ಫೋಟ ಪ್ರಕರಣದ ರೂವಾರಿ ಹಫೀಜ್ ಸಯೀದ್...
ಹಫೀಜ್ ಸಯೀದ್
ಹಫೀಜ್ ಸಯೀದ್
Updated on: 
ಇಸ್ಲಾಮಾಬಾದ್: ಭಯೋತ್ಪಾದನಾ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪದಲ್ಲಿ ಬಂಧಿತನಾಗಿರುವ ಉಗ್ರ, ಮುಂಬೈ ಸ್ಫೋಟ ಪ್ರಕರಣದ ರೂವಾರಿ ಹಫೀಜ್ ಸಯೀದ್ ತಪ್ಪಿತಸ್ಥನೆಂದು ಪಾಕಿಸ್ತಾನದ ಗುಜ್ರನ್ ವಾಲಾ ನ್ಯಾಯಾಲಯ ಪರಿಗಣಿಸಿರುವುದಾಗಿ ಸ್ಥಳೀಯ ಮಾಧ್ಯಮಗಳ ವರದಿ ತಿಳಿಸಿದೆ. ಅಲ್ಲದೆ ಈ ಪ್ರಕರಣವನ್ನು ಪಾಕಿಸ್ತಾನಕ್ಕೆ ಸೇರಿದ ಗುಜರಾತ್ ಗೆ ವರ್ಗಾಯಿಸಲಾಗಿದೆ ಎಂದು ಹೇಳಲಾಗಿದೆ.
ಭಯೋತ್ಪಾದನೆಗೆ ಹಣದ ನೆರವು ನೀಡಿದ ಆರೋಪದಲ್ಲಿ ಜಮಾತ್ ಉದ್ ದವಾ ಮುಖ್ಯಸ್ಥ, 26/11ರ ಭಯೋತ್ಪಾದನಾ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಪಾಕಿಸ್ತಾನದ ಅಧಿಕಾರಿಗಳು ಜುಲೈ 17ರಂದು ಬಂಧಿಸಿದ್ದರು.  ನಂತರ 7 ದಿನಗಳ ಆತನ ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿತ್ತು.
ಹಫೀಜ್ ಸಯೀದ್ ವಿರುದ್ಧದ ಸಂಪೂರ್ಣ ಆರೋಪಪಟ್ಟಿಯನ್ನು ಆಗಸ್ಟ್ 7ರೊಳಗೆ ಸಲ್ಲಿಸುವಂತೆ ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ)ಗೆ ನ್ಯಾಯಾಲಯ ನಿರ್ದೇಶಿಸಿತ್ತು ಎಂದು ಜಿಯೋ ನ್ಯೂಸ್ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com