ಬೀಜಿಂಗ್: ಮೂರು ದಿನಗಳ ಚೀನಾ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಸೋಮವಾರ ವಿದೇಶಾಂಗ ಸಚಿವ ವಾಂಗ್ ಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅವರು ಚೀನಾ ಉಪಾಧ್ಯಕ್ಷ ವಾಂಗ್ ಕಿಶನ್ ಅವರನ್ನು ಭೇಟಿಯಾಗಿದ್ದರು. ಭಾರತ - ಚೀನಾ ಸಾಂಸ್ಕೃತಿಕ ವಿನಿಮಯ ಕುರಿತು ಎರಡನೇ ಸಭೆಯಲ್ಲಿ ಭಾಗಿಯಾಗಲು ಜೈಶಂಕರ್ ಮೂರು ದಿನಗಳ ಭೇಟಿಗಾಗಿ ಇಲ್ಲಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿರುವ ಅವರು ಅಸ್ಥಿರ ಜಗತ್ತಿನಲ್ಲಿ ಭಾರತ-ಚೀನಾ ದ್ವಿಪಕ್ಷೀಯ ಸಂಬಂಧ ಸ್ಥಿರತೆಯ ಅಂಶವಾಗಿರಬೇಕು ಎಂದು ಹೇಳಿದ್ದಾರೆ.
ಭಾರತ - ಚೀನಾ ಸಾಂಸ್ಕೃತಿಕ ವಿನಿಮಯ ಕುರಿತ ಸಭೆಯ ಅಧ್ಯಕ್ಷತೆಯನ್ನು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ವಹಿಸಲಿದ್ದಾರೆ.
Advertisement