ಪ್ರಧಾನಿ ಮೋದಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಪ್ರದಾನ, ಏಳು ಒಪ್ಪಂದಗಳಿಗೆ ಭಾರತ-ದಕ್ಷಿಣ ಕೊರಿಯಾ ಸಹಿ

ದಕ್ಷಿಣ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅವರಿಗೆ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸುತ್ತಿರುವ ಪ್ರಧಾನಿ ಮೋದಿ
ಪ್ರಶಸ್ತಿ ಸ್ವೀಕರಿಸುತ್ತಿರುವ ಪ್ರಧಾನಿ ಮೋದಿ
ಸಿಯೋಲ್: ದಕ್ಷಿಣ ಕೊರಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಅವರಿಗೆ  ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ "ಸಿಯೋಲ್‌ ಶಾಂತಿ ಪ್ರಶಸ್ತಿ ಸಾಂಸ್ಕೃತಿಕ ಫೌಂಡೇಶನ್‌ " ಆಯೋಜಿಸಿದ್ದ ಸಮಾರಂಭದಲ್ಲಿ 14ನೇ ಶಾಂತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ಇದು 130 ಕೋಟಿ ಭಾರತೀಯರಿಗೆ ಸಂದ ಗೌರವ ಎಂದು ಹೇಳಿದರು. ಭಯೋತ್ಪಾದಕ ಜಾಲಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಕೈಗಳು ಸೇರಲು  ಮತ್ತು ಒಂದುಗೂಡಿಸಲು ಸಮಯ ಬಂದಿದೆ. ಹಾಗೆ ಮಾಡುವುದರಿಂದ ಮಾತ್ರ ನಾವು ದ್ವೇಷವಿದ್ದ ಜಾಗದಲ್ಲಿ ಸಾಮರಸ್ಯವನ್ನು ತರಲು ಸಾಧ್ಯವಾಗುತ್ತದೆ ಎಂದರು.
ಪ್ರಶಸ್ತಿಯ ನಗದು ಮೊತ್ತವನ್ನು ಗಂಗಾ ನದಿ ಶುದ್ಧೀಕರಣ ಯೋಜನೆಯಾದ “ನಮಾಮಿ ಗಂಗಾ ಯೋಜನೆಗೆ ಅರ್ಪಿಸುವುದಾಗಿ ಪ್ರಧಾನಿ ಹೇಳಿದರು.
ಈ ಪ್ರಶಸ್ತಿಯನ್ನು ನನಗೆ ಸೇವೆ ಮಾಡಲು ಅವಕಾಶ ಕಲ್ಪಿಸಿದ ದೇಶದ 130 ಕೋಟಿ ಜನರಿಗೆ ಅರ್ಪಿಸುತ್ತೇನೆ. ರಾಷ್ಟ್ರಪಿತ ಮಹಾತ್ಮ ಗಾಂಧಿಯವರ 150ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲೇ ನನಗೆ ಈ ಪ್ರಶಸ್ತಿ  ನೀಡಿ ಗೌರವಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಸಿಯೋಲ್‌ನಲ್ಲಿ 1990ರಲ್ಲಿ ನಡೆದ 24 ನೇ ಬೇಸಿಗೆ ಒಲಂಪಿಕ್ ಕ್ರೀಡಾಕೂಟಗಳ ಯಶಸ್ಸಿನ ಸ್ಮರಣಾರ್ಥವಾಗಿ 1990 ರಲ್ಲಿ ಸಿಯೋಲ್ ಪೀಸ್ ಪ್ರಶಸ್ತಿಯನ್ನು ಸ್ಥಾಪಿಸಲಾಯಿತು. ಇದನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ನೀಡಲಾಗುತ್ತದೆ.

ಪ್ರಶಸ್ತಿ ವಿಜೇತರಿಗೆ ಅಮೆರಿಕದ 200,000 ಡಾಲರ್‌ ಪ್ರಶಸ್ತಿ ಮೊತ್ತ ಮತ್ತು ಫಲಕ ನೀಡಲಾಗುತ್ತದೆ. ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಕೊಫಿ ಅನ್ನಾನ್ ಅವರು 1998 ರಲ್ಲಿ ಹಾಗೂ  ಜರ್ಮನ್ ನಾಯಕ ಏಂಜೆಲಾ ಮಾರ್ಕೆಲ್ ಅವರಿಗೆ 2014ರಲ್ಲಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷರ ಸಮ್ಮುಖದಲ್ಲಿ ಮೂಲಸೌಕರ್ಯ ಅಭಿವೃದ್ಧಿ, ಮಾಧ್ಯಮ, ಸ್ಟಾರ್ಟ್ ಅಪ್, ಮತ್ತು ಗಡಿಯಾಚೆಗಿನ ಭಯೋತ್ಪಾದನೆ ನಿರ್ಮೂಲನೆ ಹಾಗೂ ಅಂತಾರಾಷ್ಟ್ರೀಯ ಅಪರಾಧ ಮತ್ತಿತರ ಪ್ರಮುಖ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com