ಪುಲ್ವಾಮಾ ದಾಳಿ: ಜಾಗತಿಕ ಮಟ್ಟದಲ್ಲಿ ತೀವ್ರ ಮುಖಭಂಗಕ್ಕೀಡಾಗಿರುವ ಪಾಕ್‍ಗೆ ಶಾಕ್ ಕೊಟ್ಟ ಟ್ರಂಪ್!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಪುಲ್ವಾಮಾದಲ್ಲಿ ಭೀಕರ ಉಗ್ರ ದಾಳಿ ಬಳಿಕ ಉಭಯ ದೇಶಗಳ ನಡುವೆ ಅತ್ಯಂತ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಟ್ರಂಪ್
ಟ್ರಂಪ್
Updated on: 
ವಾಷಿಂಗ್ಟನ್: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಪುಲ್ವಾಮಾದಲ್ಲಿ ಭೀಕರ ಉಗ್ರ ದಾಳಿ ಬಳಿಕ ಉಭಯ ದೇಶಗಳ ನಡುವೆ ಅತ್ಯಂತ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 
ಪುಲ್ವಾಮಾ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಲವಾದ ಪೆಟ್ಟು ನೀಡಲು ಭಾರತ ಎದುರು ನೋಡುತ್ತಿದೆ. ಉಗ್ರ ದಾಳಿಯಲ್ಲಿ 50 ಯೋಧರನ್ನು ಕಳೆದುಕೊಂಡಿದೆ. ಪುಲ್ವಾಮಾ ದಾಳಿ ನಿಜಕ್ಕೂ ದುರದೃಷ್ಟಕರ. ಇದೇ ಘಟನೆ ಎರಡು ದೇಶಗಳ ನಡುವೆ ಅಪಾಯಕಾರಿಯಾಗಿ ಪರಿಣಮಿಸಿದೆ. ಭಾರತ-ಪಾಕಿಸ್ತಾನದ ನಡುವಿನ ವಿಷಮ ಪರಿಸ್ಥಿತಿಯನ್ನು ತಿಳಿಗೊಳಿಸಲು ನಾವು ಬಯಸುತ್ತೇವೆ ಎಂದು ಟ್ರಂಪ್ ಹೇಳಿದ್ದಾರೆ. 
ಸದ್ಯಕ್ಕೆ ನಾವು ಪಾಕಿಸ್ತಾನಕ್ಕೆ ನೀಡುತ್ತಿದ್ದ 1.3 ಬಿಲಿಯನ್ ಅಮೆರಿಕನ್ ಡಾಲರ್ ಅನುದಾನ ಸ್ಧಗಿತಗೊಳಿಸಲಾಗಿದ್ದು ಮುಂದಿನ ದಿನಗಳಲ್ಲಿ ಪಾಕಿಸ್ತಾನದೊಂದಿಗೆ ಸಭೆ ನಡೆಸಿ, ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಸೂಚಿಸುತ್ತೇವೆ ಎಂದರು.
ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರರ ದಾಳಿಯಲ್ಲಿ ಭಾರತದ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com