ವಿದೇಶ

ಸಾಮಾಜಿಕ ಜಾಲತಾಣಗಳೊಂದಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಭೆ: ಆದರೆ ಫೇಸ್ ಬುಕ್, ಟ್ವಿಟರ್ ಗೇ ಇಲ್ಲ ಆಹ್ವಾನ!

ಸಾಮಾಜಿಕ ಜಾಲತಾಣಗಳೊಂದಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಭೆ: ಆದರೆ ಫೇಸ್ ಬುಕ್, ಟ್ವಿಟರ್ ಗೇ ಇಲ್ಲ ಆಹ್ವಾನ!
ಸಾಮಾಜಿಕ ಜಾಲತಾಣಗಳೊಂದಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಭೆ: ಆದರೆ ಫೇಸ್ ಬುಕ್, ಟ್ವಿಟರ್ ಗೇ ಇಲ್ಲ ಆಹ್ವಾನ!
Published On :
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣಗಳ ಸಭೆಯನ್ನು ಏರ್ಪಡಿಸಿದ್ದಾರೆ. ಆದರೆ ಈ ಸಭೆಗೆ ಸಾಮಾಜಿಕ ಜಾಲತಾಣಗಳ ಪ್ರಮುಖ ಸಂಸ್ಥೆಗಳಾದ ಫೇಸ್ ಬುಕ್, ಟ್ವಿಟರ್ ಗೇ ಆಹ್ವಾನ ನೀಡಿಲ್ಲ. 
ಶ್ವೇತ ಭವನದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು,  ಕನ್ಸರ್ವೇಟೀವ್ಸ್ ಅಥವಾ ರಿಪಬ್ಲಿಕನ್ ಚಿಂತನೆಗಳನ್ನು ಫೇಸ್ ಬುಕ್ ಹಾಗೂ ಟ್ವಿಟರ್ ಸೆನ್ಸಾರ್ ಮಾಡುತ್ತವೆ ಎಂಬುದು ಡೊನಾಲ್ಡ್ ಟ್ರಂಪ್ ಅಭಿಪ್ರಾಯವಾಗಿದೆ ಆದ್ದರಿಂದ ಆಹ್ವಾನ ನೀಡಿಲ್ಲ ಎಂದು ಹೇಳಿದ್ದಾರೆ. 
ಸಾಮಾಜಿಕ ಜಾಲತಾಣಗಳ ದೈತ್ಯ ಸಂಸ್ಥೆಗಳಾದ ಫೇಸ್ ಬುಕ್ ಅಥವಾ ಟ್ವಿಟರ್ ಗೆ ಆಹ್ವಾನ ನೀಡದೇ ಸಾಮಾಜಿಕ ಜಾಲತಾಣ ಶೃಂಗಸಭೆಯನ್ನು ಕಲ್ಪಿಸಿಕೊಳ್ಳುವುದೂ ಕಷ್ಟ ಆದರೆ ಟ್ರಂಪ್ ಈ ಎರಡೂ ವೇದಿಕೆಗಳ ವಿರುದ್ಧ ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿರುವುದು ಇದೇ ಮೊದಲಲ್ಲ. 
ಫೇಸ್ ಬುಕ್ ಹಾಗೂ ಟ್ವಿಟರ್ ಎರಡೂ ರಿಪಬ್ಲಿಕನ್ ದೃಷ್ಟಿಕೋನವನ್ನು ಗೌರವಿಸುವುದಿಲ್ಲ ಎಂಬ ಕಾರಣಕ್ಕೆ ಟ್ರಂಪ್ ಹಲವು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.