ಭಯೋತ್ಪಾದನೆ ನಿಂತರಷ್ಟೆ ಮಾತುಕತೆ: ಪಾಕ್ ಪರಮಾಪ್ತ ಮಿತ್ರ ಚೀನಾ ಅಧ್ಯಕ್ಷರಿಗೆ ಮೋದಿ ಸ್ಪಷ್ಟ ಸಂದೇಶ
ವಿದೇಶ
ಭಯೋತ್ಪಾದನೆ ನಿಂತರಷ್ಟೆ ಮಾತುಕತೆ: ಪಾಕ್ ಪರಮಾಪ್ತ ಮಿತ್ರ ಚೀನಾ ಅಧ್ಯಕ್ಷರ ಮೂಲಕ ಮೋದಿ ಸ್ಪಷ್ಟ ಸಂದೇಶ
ಶಾಂಘೈ ಶೃಂಗಸಭೆಯ ಪಾರ್ಶ್ವದಲ್ಲಿ ಈಗಾಗಲೇ ಪಾಕಿಸ್ತಾನ ಪ್ರಧಾನಿಗೆ ಮುಖಭಂಗ ಉಂಟುಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.
ಶಾಂಘೈ ಶೃಂಗಸಭೆಯ ಪಾರ್ಶ್ವದಲ್ಲಿ ಈಗಾಗಲೇ ಪಾಕಿಸ್ತಾನ ಪ್ರಧಾನಿಗೆ ಮುಖಭಂಗ ಉಂಟುಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.
ಚೀನಾ ಅಧ್ಯಕ್ಷರೊಂದಿಗಿನ ಭೇಟಿ ವೇಳೆ ಪಾಕಿಸ್ತಾನ ಭಯೋತ್ಪಾದನೆಯ ಬಗ್ಗೆ ಪ್ರಸ್ತಾಪಿಸಿರುವ ಪ್ರಧಾನಿ ನರೇಂದ್ರ ಮೋದಿ, ನಾವು ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಬೇಕಾದರೆ ಪಾಕಿಸ್ತಾನ ಮೊದಲು ಭಯೋತ್ಪಾದನೆ ನಿಲ್ಲಿಸಬೇಕೆಂಬ ಷರತ್ತು ವಿಧಿಸಿದ್ದಾರೆ. ಅಷ್ಟೇ ಅಲ್ಲದೇ ನಾವು ಪಾಕಿಸ್ತಾನದೊಂದಿಗೆ ಸೌಹಾರ್ದ ಸಂಬಂಧ ಮುಂದುವರೆಸಲು ಸಾಕಷ್ಟು ಪ್ರಯತ್ನ ನಡೆಸಿದೆವು ಆದರೆ ಅದೆಲ್ಲವನ್ನೂ ಪಾಕಿಸ್ತಾನವೇ ವಿಫಲಗೊಳಿಸಿತು ಎಂದು ಹೇಳಿದ್ದಾರೆ.
ಶೃಂಗಸಭೆಯ ವೇಳೆ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನ್ನೂ ಭೇಟಿ ಮಾಡಲಿದ್ದು, ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷರ ಬಳಿ ಪಾಕಿಸ್ತಾನ ಉಗ್ರವಾದ ನಿಲ್ಲಿಸಿದರಷ್ಟೇ ಮಾತುಕತೆ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ