ಹಿಂದೂಗಳ ವಿರುದ್ಧ ಹೇಳಿಕೆ: ಸಚಿವನನ್ನು ಸಂಪುಟದಿಂದ ಕಿತ್ತೆಸೆದ ಪಾಕ್ ಪ್ರಧಾನಿ ಇಮ್ರಾನ್!

ಸದ್ಯ ಪಾಕಿಸ್ತಾನ ಮತ್ತು ಭಾರತ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಈ ಮಧ್ಯೆ ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ...
ಫಯಾಜ್-ಇಮ್ರಾನ್ ಖಾನ್
ಫಯಾಜ್-ಇಮ್ರಾನ್ ಖಾನ್
ಲಾಹೋರ್: ಸದ್ಯ ಪಾಕಿಸ್ತಾನ ಮತ್ತು ಭಾರತ ನಡುವೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಈ ಮಧ್ಯೆ ಹಿಂದೂಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಪಾಕಿಸ್ತಾನದ ಪಂಜಾಬ್ ಸಚಿವ ಫಯಾಜ್ ಉಲ್ ಹಸ್ಸನ್ ಚೋಹನ್ ರನ್ನು ಸಂಪುಟದಿಂದ ವಜಾ ಮಾಡಲಾಗಿದೆ.
ಪಂಜಾಬ್ ಸರ್ಕಾರದಲ್ಲಿ ಮಾಹಿತಿ ಹಾಗೂ ಸಂಸ್ಕೃತಿ ಸಚಿವ ಫಯಾಜ್ ಹಿಂದೂಗಳ ವಿರುದ್ಧ ಹೇಳಿಕೆ ನೀಡಿದ್ದರು. ಇದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪಂಜಾಬ್ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಗೆ ಸೂಚನೆ ನೀಡಿದ್ದರು. ಅದರಂತೆ ಅವರನ್ನು ಸಂಪುಟದಿಂದ ವಜಾ ಮಾಡಲಾಗಿದೆ.
ಹಿಂದೂಗಳ ವಿರುದ್ಧ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕ್ಕಿದ್ದ ಫಯಾಜ್ ನಂತರ ಎಚ್ಚೆತ್ತು ನಾನು ನ್ನ ಹೇಳಿಕೆಗೆ ಕ್ಷಮೆ ಕೇಳುತ್ತೇನೆ. ಪಾಕಿಸ್ತಾನದಲ್ಲಿರುವ ಹಿಂದು ಸಮುದಾಯ ಉದ್ದೇಶಿಸಿ ನಾನು ಈ ಹೇಳಿಕೆ ನೀಡಿಲ್ಲ. ನಾನು ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಲ್ಲಿನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com