ಲಂಡನ್: ನೀರವ್ ಮೋದಿಗೆ ಜಾಮೀನು ನಿರಾಕರಣೆ, ಮಾ. 29ರ ವರೆಗೆ ಜೈಲೇ ಗತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರುಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್‌ ಮೋದಿ...
ನೀರವ್ ಮೋದಿ
ನೀರವ್ ಮೋದಿ
ಲಂಡನ್: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ವಂಚನೆ ಪ್ರಕರಣದ ಪ್ರಮುಖ ಆರೋಪಿ, ವಜ್ರದ ವ್ಯಾಪಾರಿ ನೀರವ್‌ ಮೋದಿಗೆ ಲಂಡನ್ ಕೋರ್ಟ್ ಜಾಮೀನು ನಿರಾಕರಿಸಿದ್ದು, ಮಾರ್ಚ್ 29ರ ವರೆಗೆ ಜೈಲಿಗೆ ಕಳುಹಿಸಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್ ಮೋದಿಯನ್ನು ಗಡೀಪಾರು ಮಾಡುವಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ ಕೋರಿಕೆ ಮೇರೆಗೆ ಲಂಡನ್ ಕೋರ್ಟ್ ನೀರವ್ ಮೋದಿ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಲಂಡನ್ ಪೊಲೀಸರು ನೀರವ್ ಮೋದಿಯನ್ನು ಇಂದು ಲಂಡನ್ ನ ಹೊಲ್ಬರ್ನ್ ಮೆಟ್ರೋ ನಿಲ್ದಾಣದಲ್ಲಿ ಬಂಧಿಸಿದ್ದರು.
ಲಂಡನ್ ಕೋರ್ಟ್ ಜಾಮೀನು ನಿರಾಕರಿಸಿದ ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನೀರವ್ ಮೋದಿ ನಿರಾಕರಿಸಿದ್ದಾರೆ.
ದೇಶದ ಕಾನೂನಿನ ಕಣ್ಣಿಗೆ ಮಣ್ಣರೆಚಿ ತಲೆಮರೆಸಿಕೊಂಡಿರುವ ನೀರವ್ ಮೋದಿಯ ಗಡೀಪಾರಿಗೆ ಸಿಬಿಐ ಕೂಡ ಎಲ್ಲ ಪ್ರಯತ್ನಗಳನ್ನು ನಡೆಸಿತ್ತು. ನೀರವ್ ಮೋದಿ ವಿರುದ್ಧ ಜಾರಿ ಮಾಡಿದ ರೆಡ್ ಕಾರ್ನರ್ ನೋಟಿಸ್ ಗೆ ಯುನೈಟೆಡ್ ಕಿಂಗ್ ಡಂ ಸ್ಪಂದಿಸಿದೆ. 
2018ರ ಜೂನ್ ನಲ್ಲಿ ನೀರವ್ ಮೋದಿ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು.
ಪಂಜಾಬ್‌ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂ ವಂಚಿಸಿದ ಪ್ರಕರಣ ಬೆಳಕಿಗೆ ಬಂದ ಕೂಡಲೇ ನೀರವ್ ಮೋದಿ ಮತ್ತು ಆತನ ಚಿಕ್ಕಪ್ಪ ಮೆಹುಲ್ ಚೋಕ್ಸಿ ದೇಶಬಿಟ್ಟು ಪರಾರಿಯಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com