ಚಿಕಿತ್ಸೆಗಾಗಿ ನವಾಜ್ ಷರೀಫ್ ಗೆ ಜಾಮೀನು

ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು,....
ನವಾಜ್ ಷರೀಫ್
ನವಾಜ್ ಷರೀಫ್
Updated on: 
ಇಸ್ಲಾಮಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಪಾಕಿಸ್ತಾನದ ಪದಚ್ಯುತ ಪ್ರಧಾನಿ ನವಾಜ್ ಷರೀಫ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಪಾಕ್ ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದೆ.
69 ವರ್ಷದ ನವಾಜ್ ಷರೀಫ್ ಅವರು  ಅಲ್-ಅಝಿಝಿಯಾ ಸ್ಟೀಲ್ ಮಿಲ್ಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಕಳೆದ ವರ್ಷ ಡಿಸೆಂಬರ್ ನಿಂದ ಜೈಲಿನಲ್ಲಿದ್ದಾರೆ.
ಜೈಲಿನಲ್ಲಿರುವ ನವಾಜ್ ಷರೀಫ್ ಅವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಫೆಬ್ರವರಿ 25ರಂದು ವಜಾಗೊಳಿಸಿತ್ತು.
ಹೈಕೋರ್ಟ್ ಆದೇಶದ ವಿರುದ್ಧ ಪಾಕ್ ಮಾಜಿ ಪ್ರಧಾನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವೈದ್ಯಕೀಯ ಚಿಕಿತ್ಸೆಗಾಗಿ ಆರು ವಾರಗಳ ಕಾಲ ನವಾಜ್ ಷರೀಫ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಆದರೆ ದೇಶಬಿಟ್ಟು ಹೋಗುವಂತಿಲ್ಲ ಎಂಬ ಷರತ್ತು ವಿಧಿಸಿದೆ.
ಅವೆನ್‍ಫೀಲ್ಡ್ ಪ್ರಾಪರ್ಟಿಸ್, ಫ್ಲಾಗ್‍ಶಿಪ್ ಇನ್ವೆಸ್ಟ್‍ಮೆಂಟ್ ಹಾಗೂ ಅಲ್-ಅಝಿಝಿಯಾ ಈ ಮೂರು ಭ್ರಷ್ಟಾಚಾರ ಪ್ರಕರಣಗಳು ನವಾಜ್ ಕೊರಳು ಸುತ್ತಿಕೊಂಡಿದ್ದು, 2017ರ ಜುಲೈನಲ್ಲಿ ಪನಾಮ ಪೇಪರ್ಸ್ ಹಗರಣದಲ್ಲಿ ಸುಪ್ರೀಂಕೋರ್ಟ್ ನವಾಜ್ ಷರೀಫ್ ಅವರನ್ನು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಳಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com