ಭಾರತ ನಮ್ಮ ಪರಮಾಪ್ತ ರಾಷ್ಟ್ರ, ಸೌಹಾರ್ದ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ: ಅಮೆರಿಕ

ಹಾಲಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೇರಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗಿನ ಸ್ನೇಹ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ವಾಷಿಂಗ್ಟನ್: ಹಾಲಿ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೇರಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದೊಂದಿಗಿನ ಸ್ನೇಹ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮಾತನಾಡಿರುವ ಅಮೆರಿಕ ಕಾರ್ಯದರ್ಶಿ ಮೈಕ್ ಪೊಂಪಿಯೋ ಅವರು, ಭಾರತದ ಸಾರ್ವತ್ರಿಕ ಚುನಾವಣೆ ಬಳಿಕ ಟ್ರಂಪ್ ಆಡಳಿತ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸೌಹಾರ್ಧ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ನಿರ್ಧರಿಸಿದೆ. ಈ ಸಂಬಂಧ ಭಾರತದೊಂದಿಗಿನ ವಾಣಿಜ್ಯ ವಹಿವಾಟುಗಳು, ಒಪ್ಪಂದಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಜಂಟಿಯಾಗಿ ಕಾರ್ಯ ನಿರ್ವಹಿಸಲು ಅಮೆರಿಕ ಉತ್ಸುಕವಾಗಿದೆ ಎಂದು ಹೇಳಿದ್ದಾರೆ.
ವಿಶ್ವದ ಆರು ದೊಡ್ಡ ಆರ್ಥಿಕತೆಗಳಲ್ಲಿ ಭಾರತವೂ ಕೂಡ ಒಂದು. ಭಾರತ ಅಮೆರಿಕದ ಪರಮಾಪ್ತ ರಾಷ್ಟ್ರವಾಗಿದ್ದು, ಈ ಹಿಂದಿನಂತೆಯೇ ಭವಿಷ್ಯದಲ್ಲೂ ಕೂಡ ಉಭಯ ದೇಶಗಳ ಸೌಹಾರ್ಧ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳಲಿದೆ. ಅಂತೆಯೇ ಉಭಯ ದೇಶಗಳ ನಡುವಿನ ವಾಣಿಜ್ಯ ಸಹಕಾರ ಕೂಡ ವೃದ್ದಿಯಾಗಲಿದೆ. ಈ ಕುರಿತಂತೆ ಟ್ರಂಪ್ ಆಡಳಿತ ಕಾರ್ಯ ನಿರ್ವಹಣೆ ಮಾಡಲಿದೆ ಎಂದು ಮೈಕ್ ಪೊಂಪಿಯೋ ಹೇಳಿದ್ದಾರೆ.

ಇನ್ನು ಇತ್ತ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಅತ್ತ ಸಭೆ ಸೇರಿದ್ದ ಟ್ರಂಪ್ ಆಡಳಿತ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್ ಡಿಎ ಮೈತ್ರಿಕೂಟಕ್ಕೆ ಶುಭಾಶಯ ಕೋರಿದೆ. ಈ ಸಭೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಉಪಾಧ್ಯಕ್ಷ ಮೈಕ್ ಪೆನ್ಸ್ ಮತ್ತು ಕಾರ್ಯದರ್ಶಿ ಮೈಕ್ ಪೊಂಪಿಯೋ ಸೇರಿದಂತೆ ಟ್ರಂಪ್ ಸರ್ಕಾರದ ಪ್ರಮುಖರು ಭಾಗವಹಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com