ರಾಜನಾಥ್ ಸಿಂಗ್
ವಿದೇಶ
ಭಯೋತ್ಪಾದನೆ ನಿಗ್ರಹಕ್ಕೆ ಜಾಗತಿಕ ಸಮುದಾಯ ಕೈಜೋಡಿಸುವಂತೆ ರಾಜನಾಥ್ ಸಿಂಗ್ ಕರೆ
ಭಯೋತ್ಪಾದನೆ ನಿಗ್ರಹಕ್ಕೆ ಜಾಗತಿಕ ಸಮುದಾಯ ಕೈ ಜೋಡಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಬ್ಯಾಂಕಾಕ್ : ಭಯೋತ್ಪಾದನೆ ನಿಗ್ರಹಕ್ಕೆ ಜಾಗತಿಕ ಸಮುದಾಯ ಕೈ ಜೋಡಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ್ದಾರೆ.
ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನಲ್ಲಿ ನಡೆದ 6 ನೇ ಆಸಿಯಾನ್ ರಕ್ಷಣಾ ಸಚಿವರ ಸಭೆಯನ್ನುದ್ದೇಶಿಸಿ ಮಾದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದಕ ಸುರಕ್ಷಿತ ತಾಣಗಳನ್ನು ನಿರ್ಮೂಲನೆ ಮಾಡಲು ಮತ್ತು ಅವರ ಜಾಲಗಳನ್ನು, ಮುಖ್ಯವಾಗಿ ಹಣಕಾಸು ನೆರವು ತಡೆಯುವುದರ ಮೂಲಕ ಸುಸ್ಥಿರ ಪ್ರಾದೇಶಿಕ ಭದ್ರತೆ ಕಾಪಾಡಿಕೊಳ್ಳುವಂತೆ ತಿಳಿಸಿದರು.
ಗಡಿಯಂಚಿನ ಭಯೋತ್ಪಾದನೆ ತುಂಬಾ ಘೋರವಾಗಿದ್ದು, ಕೆಲ ದೇಶಗಳು ಪ್ರಾದೇಶಿಕ ಭದ್ರತೆಯನ್ನು ದುರ್ಬಲಗೊಳಿಸುವ ಉದ್ದೇಶದೊಂದಿಗೆ ತಮ್ಮದೇ ರಾಜಕೀಯ ಗುರಿಗಳನ್ನು ಸಾಧಿಸಲು ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವುದು ದುರಂತ ಎಂದು ಬಣ್ಣಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ