ಇಥಿಯೋಪಿಯಾ ಪ್ರಧಾನಿ ಅಬಿ ಅಹಮದ್ ಗೆ ಒಲಿದ ನೊಬೆಲ್ ಶಾಂತಿ ಪುರಸ್ಕಾರ

ಇಥಿಯೋಪಿಯಾದ ಪ್ರಧಾನಿ ಅಬಿ ಅಹಮದ್ ಅಲಿಯವರಿಗೆ 2019ರ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ.
ಅಬಿ ಅಹಮದ್
ಅಬಿ ಅಹಮದ್
Updated on

ಇಥಿಯೋಪಿಯಾದ ಪ್ರಧಾನಿ ಅಬಿ ಅಹಮದ್ ಅಲಿಯವರಿಗೆ 2019ರ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ.

"ಇಥಿಯೋಪಿಯಾದ ಪ್ರಧಾನಿ ಅಬಿ ಅಹಮದ್ ಅಲಿ ಶಾಂತಿ ಮತ್ತು ಅಂತರರಾಷ್ಟ್ರೀಯ ಸಹಕಾರವನ್ನು ಸಾಧಿಸುವ ನಿಟ್ಟಿನಲ್ಲಿ ನಡೆಸಿರುವ ಪ್ರಯತ್ನಗಳು ಮತ್ತು ನೆರೆಯ ಎರಿಟ್ರಿಯಾದೊಂದಿಗಿನ ಗಡಿ ಸಂಘರ್ಷವನ್ನು ಪರಿಹರಿಸುವಲ್ಲಿ ಅವರ ನಿರ್ಣಾಯಕ ಪಾತ್ರ ಕ್ಕಾಗಿ 2019 ರ ನೊಬೆಲ್ ಶಾಂತಿ ಬಹುಮಾನವನ್ನು ನೀಡಲು ನಾರ್ವೇಜಿಯನ್ ನೊಬೆಲ್ ಸಮಿತಿ ನಿರ್ಧರಿಸಿದೆ." ಎಂದು ನೊಬೆಲ್ ಪ್ರಶಸ್ತಿ ಆಯ್ಕೆ ಸಮಿತಿ ಘೋಷಿಸಿದೆ.

2019 ರ ನೊಬೆಲ್ ಶಾಂತಿ ಪ್ರಶಸ್ತಿಯು ಇಥಿಯೋಪಿಯಾದಲ್ಲಿ ಮತ್ತು ಪೂರ್ವ ಮತ್ತು ಈಶಾನ್ಯ ಆಫ್ರಿಕಾದ ಪ್ರದೇಶಗಳಲ್ಲಿ ಶಾಂತಿ ಮತ್ತು ಸಾಮರಸ್ಯಕ್ಕಾಗಿ ಕೆಲಸ ಮಾಡುವ ಎಲ್ಲ ಪಾಲುದಾರರನ್ನು ಒಳಗೊಳ್ಳುತ್ತದೆ."ಇಥಿಯೋಪಿಯಾದಲ್ಲಿ, ಹೆಚ್ಚಿನ ಅಭಿವೃದ್ದಿ ಕಾರ್ಯಗಳಾಗಬೇಕಿದ್ದರೂ ಶಾಂತಿ ಪ್ರಶಸ್ತಿ ವಿಜೇತರಾದ ಅಬಿ ನಾಗರಿಕರಿಗೆ  ಉತ್ತಮ ಜೀವನ ಮತ್ತು ಉಜ್ವಲ ಭವಿಷ್ಯದ ಭರವಸೆ ನೀಡುವ ಪ್ರಮುಖ ಸುಧಾರಣೆಗಳನ್ನು ಪ್ರಾರಂಭಿಸಿದ್ದಾರೆ. ಪ್ರಧಾನ ಮಂತ್ರಿಯಾಗಿ ಅವರು  ಸಾಮರಸ್ಯ, ಐಕಮತ್ಯ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದ್ದಾರೆ"

ಇಥಿಯೋಪಿಯಾ ಮತ್ತು ಎರಿಟ್ರಿಯಾ ನಡುವಿನ 20 ವರ್ಷಗಳ ಯುದ್ಧವನ್ನು ಕೊನೆಗೊಳಿಸುವ ಜವಾಬ್ದಾರಿಯನ್ನು ಪ್ರಧಾನಿ ಅಬಿ ಅಹಮದ್ ವಹಿಸಿಕೊಂಡಿದ್ದಾನೆ - ವಿವಾದಿತ ಗಡಿ ಪ್ರದೇಶದ ಈ ಯುದ್ಧ ಬಹುತೇಕ ಅರ್ಥಹೀನ ಎಂದು ಗಮನಿಸಿದ ಅವರು ಇದರಿಂದ ಎರಡೂ ರಾಷ್ಟ್ರಗಳಿಗೆ  ಭಾರಿ ಆರ್ಥಿಕ ಮತ್ತು ಮಾನವ ಸಂಪತ್ತಿನ ನಷ್ಟವಾಗುತ್ತದೆ ಎಂದು ಕಂಡುಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com