7 ಕೋಟಿ ಇನಾಮಿ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾಬಿನ್ ನನ್ನು ಹೊಡೆದುರುಳಿಸಲಾಗಿದೆ: ಡೊನಾಲ್ಡ್ ಟ್ರಂಪ್

7 ಕೋಟಿ ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.
ಹಮ್ಜಾ
ಹಮ್ಜಾ
Updated on

ವಾಷಿಂಗ್ಟನ್: 7 ಕೋಟಿ ಇನಾಮು ಹೊಂದಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ.

ಆಗಸ್ಟ್ ಮೊದಲ ವಾರದಲ್ಲೇ ಹಮ್ಜಾ ಬಿನ್ ನನ್ನು ಹತ್ಯೆ ಮಾಡಲಾಗಿದೆ ಎಂದ ಯುಎಸ್ ಗುಪ್ತಚರ ಸಂಸ್ಥೆಗಳು ವರದಿ ಮಾಡಿದ್ದವು. ಕಳೆದ ಎರಡು ವರ್ಷಗಳ ಅಮೆರಿಕ ಸೇನೆಯ ಕಾರ್ಯಾಚರಣೆಯಲ್ಲಿ ಹಮ್ಜಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಿದೆ ಎಂದು ಸ್ವತಃ ಡೊನಾಲ್ಡ್ ಟ್ರಂಪ್ ಸ್ಪಷ್ಟನೆ ನೀಡಿದ್ದಾರೆ. 

ಹಮ್ಜಾ ಬಿನ್ ತನ್ನ ತಂದೆ ಒಸಾಮಾ ಬಿನ್ ಲಾಡೆನ್ ಹಾಗೂ ಸಹೋದರ ಖಾಲಿದ್ ಬಿನ್ ಲಾಡೆನ್ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿಕೊಂಡಿದ್ದ ಹೀಗಾಗಿ ಅಮೆರಿಕ ಹಮ್ಜಾ ತಲೆಗೆ 10 ಲಕ್ಷ ಡಾಲರ್ ಇನಾಮು ಘೋಷಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com