ಹೌಡಿಯಲ್ಲಿ ಪಾಕ್ ಕುರಿತ ಮೋದಿ ಭಾಷಣ ಆಕ್ರಮಣಕಾರಿಯಾಗಿತ್ತು: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಹೌಡಿಯಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ್ದ ಭಾಷಣ ಆಕ್ರಮಣಕಾರಿಯಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.
ಹೌಡಿ ಮೋದಿ
ಹೌಡಿ ಮೋದಿ

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಭೇಟಿ ಬೆನ್ನಲ್ಲೇ ಅಚ್ಚರಿ ಮೂಡಿಸಿದ ಡೊನಾಲ್ಡ್ ಟ್ರಂಪ್ ಹೇಳಿಕೆ

ವಾಷಿಂಗ್ಟನ್: ಹೌಡಿಯಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ್ದ ಭಾಷಣ ಆಕ್ರಮಣಕಾರಿಯಾಗಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವಸಂಸ್ಥೆಯ ಸಭೆಯ ಹಿನ್ನಲೆಯಲ್ಲಿ ಅಮೆರಿಕಕ್ಕೆ ಆಗಮಿಸಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಆರ್ಥಿಕ ವಿಚಾರ, ವಾಣಿಜ್ಯ ಸಂಬಂಧ, ಕಾಶ್ಮೀರ ವಿವಾದಗಳೂ ಸೇರಿದಂತೆ ಇಮ್ರಾನ್ ಖಾನ್ ಮತ್ತು ಟ್ರಂಪ್ ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಟ್ರಂಪ್ ತಾವು ಕಾಶ್ಮೀರ ವಿಚಾರವಾಗಿ ಪರಿಣಾಮಕಾರಿ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. 

ಚರ್ಚೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ನಾನೊಬ್ಬ ಉತ್ತಮ ಮಧ್ಯಸ್ಥಗಾರ ಎಂದು ಕರೆದುಕೊಂಡರು. ನಾನು ಎರಡೂ ದೇಶಗಳ ಪ್ರಧಾನಿಗಳೊಂದಿಗೆ ಉತ್ತಮ ಸಂಬಂಧವನ್ನ ಹೊಂದಿದ್ದೇನೆ. ಕಾಶ್ಮೀರದ ವಿಚಾರವಾಗಿ ಎರಡೂ ದೇಶಗಳು ಒಪ್ಪಿದರೆ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಹೇಳಿದರು. ಅಂತೆಯೇ ಭಾರತ ಹಾಗೂ ಪಾಕ್ ಎರಡೂ ಕೂಡ ದೊಡ್ಡ ದೇಶಗಳು. ಉಭಯ ದೇಶಗಳು ಶೀಘ್ರದಲ್ಲೇ ಈ ವಿಚಾರವನ್ನು ಬಗೆಹರಿಸಿಕೊಳ್ಳಲಿವೆ ಎಂದು ಟ್ರಂಪ್ ವಿಶ್ವಾಸ ವ್ಯಕ್ತಪಡಿಸಿದರು. 

ಇನ್ನು ಹೌಡಿ ಮೋದಿ ಕಾರ್ಯಕ್ರಮದಲ್ಲಿ ಭಾರತದ ಪ್ರಧಾನಿ ಮೋದಿಯವರ ಭಾಷಣದ ವೇಳೆ ಆಕ್ರಮಣಕಾರಿ ಹೇಳಿಕೆಗಳನ್ನು ಕೇಳಿಸಿಕೊಂಡಿದ್ದೇನೆ. ಪಾಕಿಸ್ತಾನದಲ್ಲಿನ ಉಗ್ರತ್ವದ ವಿಚಾರವಾಗಿ ಮೋದಿ ಅಗ್ರೆಸ್ಸಿವ್ ಆಗಿ ಮಾತನಾಡಿದ್ದಾರೆ ಎಂದು ಟ್ರಂಪ್ ಹೇಳಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com