ಶ್ರೀಲಂಕಾದಲ್ಲಿ ಮತ್ತೊಂದು ಸ್ಫೋಟ, ಇಬ್ಬರ ಸಾವು, ಸಾವಿನ ಸಂಖ್ಯೆ 158ಕ್ಕೆ ಏರಿಕೆ!

ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಮತ್ತೆ ಬಾಂಬ್ ಸ್ಪೋಟ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ

Published: 21st April 2019 12:00 PM  |   Last Updated: 21st April 2019 03:43 AM   |  A+A-


New blast in Sri Lankan capital, two dead

ಶ್ರೀಲಂಕಾದಲ್ಲಿ ಮತ್ತೊಂದು ಸ್ಫೋಟ, ಇಬ್ಬರ ಸಾವು, ಸಾವಿನ ಸಂಖ್ಯೆ 158ಕ್ಕೆ ಏರಿಕೆ!

Posted By : RHN RHN
Source : ANI
ಕೊಲಂಬೋ: ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ಮತ್ತೆ ಬಾಂಬ್ ಸ್ಪೋಟ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಈಸ್ಟರ್ ಸಂಡೇ ದಿನವಾದ ಭಾನುವಾರ ಬೆಳಿಗ್ಗೆ ಮೂರು ಚರ್ಚ್ ಹಾಗೂ ಮೂರು ರೆಸ್ಟೋರೆಂಟ್ ಗಳಲ್ಲಿ ಸಂಭವಿಸಿದ ಸರಣಿ ಬಾಂಬ್ ದಾಳಿಗೆ 156ಮಂದಿ ಸಾವಿಗೀಡಾಗಿದ್ದರು.

ಕೊಲೊಂಬೊದಲ್ಲಿನ ಸೇಂಟ್ ಅಂತೋನಿ ಚರ್ಚ್, ಪಶ್ಚಿಮ ಕರಾವಳಿ ಪಟ್ಟಣವಾದ ನೆಗೋಂಬೊದಲ್ಲಿರುವ ಸೇಂಟ್ ಸೆಬಾಸ್ಟಿಯನ್ಸ್ ಚರ್ಚ್ ಮತ್ತು ಪೂರ್ವದ ಬ್ಯಾಟಿಕೊಲೊದಲ್ಲಿರುವ ಮತ್ತೊಂದು ಚರ್ಚ್ನಲ್ಲಿ ಸ್ಪೋಟ ಸಂಬವಿಸಿದೆ. ಅಲ್ಲದೆ ಪಂಚತಾರಾ ಹೋಟೆಲುಗಳಾದ  ಶಾಂಗ್ರಿಲಾ, ಸಿನ್ನಮೋನ್ ಗ್ರಾಂಡ್ ಮತ್ತು ಕಿಂಗ್ಸ್ ಬರಿ ಗಳನ್ನು ಗುರಿಯಾಗಿಸಿಕೊಂಡು ಸ್ಪೋಟ ನಡೆದಿತ್ತು. 

"ನಮ್ಮ ಚರ್ಚ್ ಗಳ ಮೇಲೆ ಬಾಂಬ್ ದಾಳಿಯಾಗಿದೆ, ದಯಮಾಡಿ ಬಂದು ಸಹಾಯ ಮಾಡಿ" ಎಂದು ಪಶ್ಚಿಮದ ಕರಾವಳಿ ಪಟ್ಟಣವಾದ ನೆಗೋಂಬೊದಲ್ಲಿನ ಸೇಂಟ್ ಸೆಬಾಶಿಷಿಯನ್ ಚರ್ಚ್ ನ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಳ್ಳಲಾಗಿದೆ.
 
Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp