ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ; ಸಾವಿನ ಸಂಖ್ಯೆ 359ಕ್ಕೆ ಏರಿಕೆ

ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಭೀಕರ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೊಲಂಬೋ: ಶ್ರೀಲಂಕಾದಲ್ಲಿ ಭಾನುವಾರ ಸಂಭವಿಸಿದ ಭೀಕರ ಸರಣಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವಿಗೀಡಾದವರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸ್ವತಃ ಶ್ರೀಲಂಕಾದ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಈ ವರೆಗೂ ಸರಣಿ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 359ಕ್ಕೆ ಏರಿಕೆಯಾಗಿದ್ದು, ಕೊಲಂಬೋದ ವಿವಿಧ ಆಸ್ಪತ್ರೆಗಳಲ್ಲಿ ಇನ್ನೂ 500ಕ್ಕೂ ಅಧಿಕ ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಹಲವರ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ನಿನ್ನೆಯಷ್ಟೇ ಶ್ರೀಲಂಕಾ ಅಧ್ಯಕ್ಷ ರಣಿಲ್ ವಿಕ್ರಮ ಸಿಂಘೆ ಅವರು ಉಗ್ರ ದಾಳಿ ಕುರಿತು ಭಾರತ ಮೊದಲೇ ಎಚ್ಚರಿಕೆ ನೀಡಿತ್ತು. ಆದರೆ ನಮ್ಮ ಭದ್ರತೆಯಲ್ಲೇ ಲೋಪವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದ್ದರು.
ಇನ್ನು ಕಳೆದ ಭಾನುವಾರ ಕೊಲಂಬೋದ ವಿವಿಧ ಪ್ರದೇಶಗಳಲ್ಲಿ ಒಟ್ಟು 7 ಮಂದಿ ಆತ್ಮಹತ್ಯಾ ಬಾಂಬ್ ದಾಳಿಕೋರರು ದಾಳಿ ನಡೆಸಿದ್ದರು. ಚರ್ಚ್, ಶಾಂಗ್ರೀಲಾ ಹೋಟೆಲ್ ಸೇರಿದಂತೆ ಕೊಲಂಬೋದ ವಿವಿಧೆಡೆ ನಡೆದ ಸರಣಿ ಬಾಂಬ್ ಸ್ಫೋಟದಿಂದಾಗಿ 350ಕ್ಕೂ ಅಧಿಕ ಮಂದಿ ಸಾವನ್ನಪ್ಪಿ, 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ದಾಳಿಯ ಹೊಣೆಯನ್ನು ನಿನ್ನೆಯಷ್ಟೇ ಕುಖ್ಯಾತ ಉಗ್ರಸಂಘಟನೆ ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು.
ಅಲ್ಲದೆ ಈ ಹಿಂದೆ ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ಮುಸ್ಲಿಮರ ಸಾಮೂಹಿಕ ಹತ್ಯೆಗೆ ಪ್ರತೀಕಾರವಾಗಿ ಈ ದಾಳಿ ನಡೆಸಿದ್ದೇವೆ ಎಂದು ಘೋಷಣೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com