370ನೇ ವಿಧಿ ರದ್ದು ಎಫೆಕ್ಟ್: ಈಗ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆ ಸ್ಥಗಿತಗೊಳಿಸಿದ ಪಾಕ್

ಭಾರತ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಲಂ 370ನೇ ವಿಧಿಯನ್ನು ರದ್ದುಗೊಳಿಸಿದ ಪರಿಣಾಮ ಈಗಾಗಲೇ ರಾಜತಾಂತ್ರಿಕ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಇಸ್ಲಾಮಾಬಾದ್: ಭಾರತ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಕಲಂ 370ನೇ ವಿಧಿಯನ್ನು ರದ್ದುಗೊಳಿಸಿದ ಪರಿಣಾಮ ಈಗಾಗಲೇ ರಾಜತಾಂತ್ರಿಕ ಸಂಬಂಧಗಳನ್ನು ಕಡಿದುಕೊಂಡಿರುವ ಪಾಕಿಸ್ತಾನ ಈಗ ಲಾಹೋರ್- ದೆಹಲಿ ನಡುವಿನ ಸಂಜೋತಾ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ರದ್ದುಗೊಳಿಸಿದೆ.
ಭಾರತ 370ನೇ ವಿಧಿ ರದ್ದುಗೊಳಿಸಿದ್ದಕ್ಕೆ ಪ್ರತಿಯಾಗಿ ಪಾಕಿಸ್ತಾನ ಈ ಕ್ರಮಕಗೊಂಡಿದೆ.
ನಿನ್ನೆ ರಾಷ್ಟ್ರೀಯ ಭದ್ರತಾ ಸಮಿತಿ(ಎನ್ಎಸ್ ಸಿ) ಸಭೆ ನಡೆಸಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು, ಭಾರತದ ಜೊತೆ ಎಲ್ಲಾ ರಾಜತಾಂತ್ರಿಕ ಮತ್ತು ದ್ವಿಪಕ್ಷೀಯ ವ್ಯಾಪಾರವನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು.
ಇನ್ನು ಮುಂದೆ ದೆಹಲಿಯಲ್ಲಿ ನಮ್ಮ ರಾಯಭಾರಿ ಇರುವುದಿಲ್ಲ ಮತ್ತು ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಲಾಗುವುದು ಎಂದು ಎನ್ ಎಸ್ ಸಿ ಸಭೆಯ ನಂತರ ಪಾಕ್ ವಿದೇಶಾಂಗ ವ್ಯವಹಾರಗಳ ಸಚಿವವ ಶಾಹ್ ಮಹಮೂದ್ ಖುರೇಷಿ ಅವರು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com