ಕಾಶ್ಮೀರ ಆರ್ಟಿಕಲ್ 370: ಭಾರತದ ವಿರುದ್ಧ ವಿಶ್ವಸಂಸ್ಥೆಗೆ ಪತ್ರ ಬರೆದ ಪಾಕ್ ಗೆ ತೀವ್ರ ನಿರಾಸೆ!

ಪದೇ ಪದೇ ಜಾಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸುತ್ತಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ಮುಖ ಭಂಗ ಎದುರಿಸಿದೆ.

ಆರ್ಟಿಕಲ್ 370 ರದ್ದತಿ ಬಗ್ಗೆ ಪಾಕಿಸ್ತಾನ ಪತ್ರ ಬರೆದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ನಿರ್ಣಯವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿತ್ತು. ಆದರೆ ಈ ಪತ್ರಕ್ಕೆ ವಿಶ್ವಸಂಸ್ಥೆ ಯಾವುದೇ ಪ್ರತಿಕ್ರಿಯೆ ನೀಡುವುದಕ್ಕೆ ನಿರಾಕರಿಸಿದೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ  ಗುಟೆರೆಸ್ ಪಾಕ್ ಪತ್ರದ ಬಗ್ಗೆ ಪ್ರತಿಕ್ರಿಯೆ ನೀಡಲು ಸಾರಾಸಗಟಾಗಿ ನಿರಾಕರಿಸಿದ್ದಾರೆ. 
ಪಾಕ್ ಬರೆದ ಪತ್ರಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್ ನಲ್ಲಿ ಮಾಧ್ಯಮಗಳು ಪ್ರತಿಕ್ರಿಯೆ ಕೇಳಲು ಬಂದಾಗ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಆಂಟೋನಿಯೋ ಗುಟೆರೆಸ್ ಸ್ಪಷ್ಟಪಡಿಸಿದ್ದಾರೆ. 
ಇದಕ್ಕೂ ಮುನ್ನ ಜಮ್ಮು-ಕಾಶ್ಮೀರದಲ್ಲಿ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಉಭಯ ರಾಷ್ಟ್ರಗಳಿಗೆ ವಿಶ್ವಸಂಸ್ಥೆ ಸೂಚನೆ ನೀಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com