ಪಾಕ್‌ನ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆದಿದ್ದು ನಿಜ; ಸತ್ಯ ಒಪ್ಪಿಕೊಂಡ ಇಮ್ರಾನ್ ಮತ್ತೆ ಹೆದರಿಕೊಂಡಿರುವುದೇಕೆ?

ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲಿನ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್‌ನ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿತ್ತು ಎಂಬುದನ್ನು ಕೊನೆಗೂ ಒಪ್ಪಿಕೊಂಡಿರುವ ಪಾಕಿಸ್ತಾನ ಪ್ರಧಾನಿ...
ನರೇಂದ್ರ ಮೋದಿ-ಇಮ್ರಾನ್ ಖಾನ್
ನರೇಂದ್ರ ಮೋದಿ-ಇಮ್ರಾನ್ ಖಾನ್

ಇಸ್ಲಾಮಾಬಾದ್/ನವದೆಹಲಿ: ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲಿನ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್‌ನ ಬಾಲಾಕೋಟ್‌ನಲ್ಲಿ ವಾಯುದಾಳಿ ನಡೆಸಿತ್ತು ಎಂಬುದನ್ನು ಕೊನೆಗೂ ಒಪ್ಪಿಕೊಂಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಇದೀಗ ಮತ್ತೊಂದು ಆತಂಕ ವ್ಯಕ್ತಪಡಿಸಿದ್ದಾರೆ. 

ಪುಲ್ವಾಮಾ ದಾಳಿಗೆ ಪಿಎಂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಿಟ್ಟ ಪ್ರತೀಕಾರ ತೀರಿಸಿಕೊಂಡಿತ್ತು. ಈ ಮೂಲಕ ಪಾಕಿಸ್ತಾನಕ್ಕೆ ದೊಡ್ಡ ಹೊಡೆತ ನೀಡಿದ್ದು, ಇದನ್ನು ಅರಗಿಸಿಕೊಳ್ಳಲು ಪಾಕ್ ಗೆ ಕಷ್ಟವಾಗಿತ್ತು. ಇದೇ ಕಾರಣಕ್ಕೆ ಮೊದಲಿಗೆ ವಾಯುದಾಳಿಯನ್ನು ಒಪ್ಪಿಕೊಳ್ಳಲು ಪಾಕ್ ಮುಂದಾಗಿರಲಿಲ್ಲ.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370)ವನ್ನು ಕಿತ್ತೆಸೆದಿರುವ ಭಾರತ ಇದೀಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಬಾಲಾಕೋಟ್ ದಾಳಿಗಿಂತಲೂ ಭಯಾನಕ ದಾಳಿಗೆ ಸಿದ್ಧತೆ ನಡೆಸಿದೆ ಎಂದು ಇಮ್ರಾನ್ ಖಾನ್ ಆತಂಕ ವ್ಯಕ್ತಪಡಿಸಿದ್ದಾರೆ. 

ಪಾಕಿಸ್ತಾನ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಇಮ್ರಾನ್ ಖಾನ್ ಆಕ್ರಮಿತ ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಭಾರತದ ವಿರುದ್ದ ವಾಗ್ದಾಳಿ ನಡೆಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com