ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ – ಅಜಿತ್ ದೋವಲ್ ಮಾತುಕತೆ

ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ರಷ್ಯಾದಲ್ಲಿ ಅಜಿತ್ ದೋವಲ್
ರಷ್ಯಾದಲ್ಲಿ ಅಜಿತ್ ದೋವಲ್

ಮಾಸ್ಕೋ: ರಷ್ಯಾದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರನ್ನು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಮುಂದಿನ ತಿಂಗಳು ವ್ಲಾಡಿವೋಸ್ಟಾಕ್ ನಲ್ಲಿ ನಡೆಯಲಿರುವ ಪೂರ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳಿರುವ ಹಿನ್ನೆಲೆಯಲ್ಲಿ ಅಲ್ಲಿನ ಸಿದ್ಧತೆಗಳು ಮೊದಲಾದವುಗಳ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ರಷ್ಯಾದೊಂದಿಗೆ ಮಾತುಕತೆ ನಡೆಸಿದ್ದಾರೆ.

ರಷ್ಯಾದ ಭದ್ರತಾ ಮಂಡಳಿ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೆವ್ ಅವರ ಆಹ್ವಾನದ ಮೇರೆಗೆ ಅಲ್ಲಿಗೆ ದೋವೆಲ್ ಭೇಟಿ ನೀಡಿದ್ದು ಉಭಯ ದೇಶಗಳು ಭಯೋತ್ಪಾದನೆ ನಿಗ್ರಹಕ್ಕೆ ಸಹಕಾರ ವರ್ಧನೆಯನ್ನು ಪುನರುಚ್ಚರಿಸಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.

ಅಜಿತ್ ದೋವೆಲ್ ಮತ್ತು ನಿಕೋಲಾಯ್ ಪಟ್ರುಶೆವ್ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಚಾರಗಳ ಕುರಿತಂತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಉಭಯ ದೇಶಗಳ ನಡುವಣ ವಿಶೇಷ ತಂತ್ರಗಾರಿಕಾ ಪಾಲುದಾರಿಕೆಯ ವಿಶ್ವಾಸ ಕುರಿತಂತೆ ಇಬ್ಬರು ನಾಯಕರು ಚರ್ಚೆ ನಡೆಸಿದರು ಎಂದು ಹೇಳಿಕೆ ತಿಳಿಸಿದೆ.

ಇನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿ ರದ್ದುಗೊಂಡ ಬೆನ್ನಲ್ಲೇ, ಕಣಿವೆಯ ಭದ್ರತಾ ಉಸ್ತುವಾರಿ ಹೊತ್ತಿದ್ದ ಅಜಿತ್ ಧೋವಲ್, ಇದೀಗ ರಷ್ಯಾದ ಭದ್ರತಾ ಸಲಹೆಗಾರ ನಿಕೋಲಾಯ್ ಪತ್ರುಸೇವ್ ಅವರನ್ನು ಅಜಿತ್ ಧೋವಲ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಪೂರ್ವ ಆರ್ಥಿಕ ವೇದಿಕೆ(EEF) ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇದೇ ಸೆಪ್ಟೆಂಬರ್’ನಲ್ಲಿ ಪ್ರಧಾನಿ ಮೋದಿ ರಷ್ಯಾದ ವ್ಲಾದಿವೋಸ್ಟೋಕ್’ಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಜಿತ್ ಧೋವಲ್ ರಷ್ಯಾ  ಪ್ರವಾಸದಲ್ಲಿದ್ದು, ಉಭಯ ರಾಷ್ಟ್ರಗಳ ನಡುವಿನ ಭದ್ರತಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com