ಕಾಶ್ಮೀರ ವಿಚಾರ ಇಂಡೋ-ಪಾಕ್ ನಡುವಿನ ದ್ವಿಪಕ್ಷೀಯ ವಿಚಾರ: ಫ್ರಾನ್ಸ್

ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಕಾಶ್ಮೀರ ವಿಚಾರ ಆ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯ ಎಂದು ಫ್ರಾನ್ಸ್ ಸರ್ಕಾರ ಹೇಳಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪ್ಯಾರಿಸ್: ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಶೀಥಲ ಸಮರಕ್ಕೆ ಕಾರಣವಾಗಿರುವ ಕಾಶ್ಮೀರ ವಿಚಾರ ಆ ದೇಶಗಳ ನಡುವಿನ ದ್ವಿಪಕ್ಷೀಯ ವಿಷಯ ಎಂದು ಫ್ರಾನ್ಸ್ ಸರ್ಕಾರ ಹೇಳಿದೆ.

ಪಾಕಿಸ್ತಾನದ ವಿದೇಶ ಸಚಿವ ಶಾ ಮೆಹ್ಮೂದ್ ಕುರೇಶಿ ಜೊತೆ ಫೋನ್‌ನಲ್ಲಿ ನಡೆಸಿದ ಮಾತುಕತೆಯ ವೇಳೆ, ಫ್ರಾನ್ಸ್‌ನ ಯುರೋಪ್ ಮತ್ತು ವಿದೇಶ ವ್ಯವಹಾರಗಳ ಸಚಿವ ಜೀನ್-ಯವೆಸ್ ಲಿ ಡ್ರಿಯನ್ ಈ ಮಾತುಗಳನ್ನು ಹೇಳಿದರು. '
ಕಾಶ್ಮೀರ ವಿಚಾರವು ಭಾರತ ಮತ್ತು ಪಾಕಿಸ್ತಾನಗಳ ನಡುವಿನ ದ್ವಿಪಕ್ಷೀಯ ವಿಷಯವಾಗಿದೆ ಹಾಗೂ ಶಾಶ್ವತ ಶಾಂತಿಯನ್ನು ಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ. 

ಅಂತೆಯೇ ಕಾಶ್ಮೀರದಲ್ಲಿ ಶಾಶ್ವತ ಶಾಂತಿಯನ್ನು ಸ್ಥಾಪಿಸುವ ನಿಟ್ಟಿನಲ್ಲಿ ಉಭಯ ದೇಶಗಳು ತಮ್ಮ ದ್ವಿಪಕ್ಷೀಯ ಒಪ್ಪಂದಗಳ ಅಡಿಯಲ್ಲಿ ಈ ವಿವಾದವನ್ನು ಬಗೆಹರಿಸಿಕೊಳ್ಳಬೇಕಿದೆ ಎಂದು ಹೇಳಿದ್ದಾರೆ. ಅಂತೆಯೇ ಸಂಯಮ ಕಾಪಾಡಿಕೊಳ್ಳುವಂತೆ, ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಹಾಗೂ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವಂತೆ ಫ್ರಾನ್ಸ್ ಸರ್ಕಾರ ಭಾರತ ಮತ್ತು ಪಾಕಿಸ್ತಾನಗಳಿಗೆ ಕರೆ ನೀಡಿದೆ.

ಇನ್ನು ಈ ಹಿಂದೆ ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ವಿಧಿ 370ನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಫ್ರಾನ್ಸ್ ಸರ್ಕಾರ ಈ ಕುರಿತು ತನ್ನ ಪ್ರತಿಕ್ರಿಯೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com