ಕಾಶ್ಮೀರ ಭಾರತ-ಪಾಕ್ ನಡುವಿನ ದ್ವಿಪಕ್ಷೀಯ ವಿಚಾರ, 3ನೇ ವ್ಯಕ್ತಿಯ ಮಧ್ಯಸ್ಥಿಕೆ ಅನಪೇಕ್ಷಿತ: ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್

ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು, ಇಲ್ಲಿ 3ನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆ ಅನಪೇಕ್ಷಿತ ಎಂದು ಹೇಳುವ ಮೂಲಕ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಪರೋಕ್ಷ ಟಾಂಗ್ ನೀಡಿದ್ದಾರೆ.
ಪ್ರಧಾನಿ ಮೋದಿ ಮತ್ತು ಫಾರ್ನ್ಸ್ ಅಧ್ಯಕ್ಷ ಮ್ಯಾಕ್ರನ್
ಪ್ರಧಾನಿ ಮೋದಿ ಮತ್ತು ಫಾರ್ನ್ಸ್ ಅಧ್ಯಕ್ಷ ಮ್ಯಾಕ್ರನ್

ಫ್ರಾನ್ಸ್ ರಾಷ್ಟ್ರಪತಿ ಎಮ್ಯಾನುಯೇಲ್ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ, ಜಿ -7 ಶೃಂಗಸಭೆಯಲ್ಲಿ ಭಾಗಿ

ಪ್ಯಾರಿಸ್: ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು, ಇಲ್ಲಿ 3ನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆ ಅನಪೇಕ್ಷಿತ ಎಂದು ಹೇಳುವ ಮೂಲಕ ಮಧ್ಯಸ್ಥಿಕೆ ವಹಿಸಲು ಸಿದ್ಧವಾಗಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ಪರೋಕ್ಷ ಟಾಂಗ್ ನೀಡಿದ್ದಾರೆ.

ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫ್ರಾನ್ಸ್ ರಾಷ್ಟ್ರಪತಿ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿದ್ದಾರೆ. ಎರಡು ದಿನಗಳ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಗುರುವಾರ ಪ್ಯಾರಿಸ್ ಗೆ ಆಗಮಿಸಿದರು. ಈ ವೇಳೆ ಜಂಟಿ ಹೇಳಿಕೆ ಸಂದರ್ಭದಲ್ಲಿ ಮಾತನಾಡಿದ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆ ನಡೆಸುತ್ತಿದ್ದಾಗ ಕಾಶ್ಮೀರ ವಿಚಾರವಾಗಿ ಚರ್ಚೆ ನಡೆಸಿದೆವು. ನನ್ನ ಅಭಿಪ್ರಾಯದಂತೆ ಕಾಶ್ಮೀರ ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ದ್ವಿಪಕ್ಷೀಯ ವಿಚಾರವಾಗಿದ್ದು, ಇಲ್ಲಿ 3ನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆ ಅನಪೇಕ್ಷಿತ. ಮೂರನೇ ವ್ಯಕ್ತಿಯ ಮಧ್ಯ ಪ್ರವೇಶದಿಂದಾಗಿ ಕಣಿವೆ ರಾಜ್ಯದಲ್ಲಿ ಅಶಾಂತಿ ತಲೆದೋರಬಹುದು. ಆದರೆ ಶಾಂತಿ ಮುಂದುವರಿಕೆ ಇಲ್ಲಿ ಮುಖ್ಯ.  ಅಂತೆಯೇ ಸ್ಥಳೀಯರ ಹಕ್ಕುಗಳ ರಕ್ಷಣೆ ಕೂಡ ಮುಖ್ಯ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರೊಂದಿಗೂ ನಾನು ಮಾತನಾಡಿದ್ದು, ದ್ವಿಪಕ್ಷೀಯವಾಗಿಯೇ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದೇನೆ ಎಂದು ಮ್ಯಾಕ್ರನ್ ಹೇಳಿದರು.

ಇನ್ನು ಇದೇ ವೇಳೆ ಭಾರತದೊಂದಿಗಿನ ರಾಫೆಲ್ ಯುದ್ಧ ವಿಮಾನ ಒಪ್ಪಂದದ ಕುರಿತು ಮಾತನಾಡಿದ ಮ್ಯಾಕ್ರನ್, ಒಪ್ಪಂದದಂತೆ ಮುಂದಿನ ತಿಂಗಳು ಭಾರತಕ್ಕೆ ಮೊದಲ ರಾಫೆಲ್ ಯುದ್ಧ ವಿಮಾನವನ್ನು ಹಸ್ತಾಂತರಿಸಲಿದ್ದೇವೆ. ಇದಕ್ಕಾಗೆ ಎಲ್ಲ ಕಾರ್ಯ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com