ಪಿಎಂ ನರೇಂದ್ರ ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ

ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಜಯೀದ್' ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. 
ಪಿಎಂ ನರೇಂದ್ರ ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪಿಎಂ ನರೇಂದ್ರ ಮೋದಿಗೆ ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಯುಎಇಯ ಅತ್ಯುನ್ನತ ನಾಗರಿಕ ಪ್ರಶಸ್ತಿ 'ಆರ್ಡರ್ ಆಫ್ ಜಯೀದ್' ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮೋದಿಯವರ ಶ್ಲಾಘನೀಯ ಪ್ರಯತ್ನವನ್ನು ಮೆಚ್ಚಿ ಶನಿವಾರ ಈ ಅತ್ಯುನ್ನತ ಗೌರವ ನೀಡಿ ಸನ್ಮಾನಿಸಲಾಗಿದೆ.

ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ರಾಣಿ ಎಲಿಜಬೆತ್ II ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್  ಸೇರಿ ಹಲವಾರು ವಿಶ್ವ ನಾಯಕರು ಈ ಪ್ರಶಸ್ತಿಯಿಂದ ಗೌರವಿಸಲ್ಪಟ್ಟಿದ್ದರು.

"ಯುಎಇ ಸಂಸ್ಥಾಪಕ ಪಿತಾಮಹ  ಶೇಖ್ ಜಾಯೆದ್ ಬಿನ್ ಸುಲ್ತಾನ್ ಅಲ್ ನಹ್ಯಾನ್ ಅವರ ಹೆಸರಿನಲ್ಲಿ ಈ ಪ್ರಶಸ್ತಿ ಇದ್ದು ವಿಶೇಷ ಮಹತ್ವ ಪಡೆದುಕೊಂಡಿದೆ.ಇದನ್ನು ಶೇಖ್ ಜಾಯೆದ್ ಅವರ ಜನ್ಮ ಶತಮಾನೋತ್ಸವದ ವರ್ಷದಲ್ಲಿ ಪ್ರಧಾನಿ ಮೋದಿಯವರಿಗೆ ನೀಡಲಾಯಿತು" ಎಂದು ವಿದೇಶಾಂಗ ಸಚಿವಾಲಯ (ಎಂಇಎ )ಹೇಳಿಕೆಯಲ್ಲಿ ತಿಳಿಸಿದೆ.

ಭಾರತ, ಯುಎಇ ಸಾಂಸ್ಕೃತಿಕ, ಧಾರ್ಮಿಕ ಮತ್ತು ಆರ್ಥಿಕ  ಕ್ಷೇತ್ರದ ನಿಕಟ ಮತ್ತು ಬಹುಮುಖಿ ಸಂಬಂಧ ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಶ್ರಮಿಸಿದ್ದಾರೆ. ಅವರು ಈ ಹಿಂದೆ ಆಗಸ್ಟ್ 2015 ರಲ್ಲಿ ಯುಎಇಗೆ ಭೇಟಿ ನೀಡಿದ ವೇಳೆ ಉಭಯ ರಾಷ್ಟ್ರಗಳ ಸಂಬಂಧ ಮತ್ತಷ್ಟು ಗಟ್ಟಿಗೊಳ್ಳುವ ಬಗೆಗೆ ಅತ್ಯುತ್ತಮ ಸಹಕಾರ ನೀಡಿದರೆ. ಈ ಹಿಂದೆ ಏಪ್ರಿಲ್ ನಲ್ಲಿ ಯುಎಇ ದೇಶದ ಅತ್ಯುನ್ನತ ಪ್ರಶಸ್ತಿಯನ್ನು ಮೋದಿಗೆ ನೀಡುವುದಾಗಿ ಘೋಷಿಸಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com