ತೀವ್ರವಾಗಿ ಹದಗೆಟ್ಟ ನವಾಜ್ ಷರೀಫ್ ಆರೋಗ್ಯ: ಸಾವು ಬದುಕಿನ ನಡುವೆ ಪಾಕ್ ಮಾಜಿ ಪ್ರಧಾನಿ ಹೋರಾಟ

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ .
ನವಾಜ್ ಷರೀಫ್
ನವಾಜ್ ಷರೀಫ್

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಆರೋಗ್ಯ ತೀವ್ರ ಹದಗೆಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರನ್ನು ಇನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಸ್ತುತ ಷರೀಷ್ ಅವರು ಲಂಡನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಯಾವ ಸುಧಾರಣೆಯೂ ಕಂಡುಬಂದಿಲ್ಲ ಎಂದು ಹೇಳಲಾಗುತ್ತಿದೆ. 

ಈ ಕುರಿತು ಮಾಹಿತಿ ನೀಡಿರುವ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ಪಕ್ಷದ ವಕ್ತಾರೆ ಮರ್ರಿಯುಮ್ ಔರಂಗ್ಜೇಬ್ ಅವರು, ಶರೀಷ್ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಇಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಲಂಡನ್ ನಿಂದ ಅಮೆರಿಕಾಗೆ ಕರೆದೊಯ್ಯುವುದೇ ವೈದ್ಯಕೀಯ ತಂಡಕ್ಕೆ ದೊಡ್ಡ ಸವಾಲಾಗಿದೆ ಎಂದು ಹೇಳಿದ್ದಾರೆ. 

ವೈದ್ಯಕೀಯ ವರದಿಗಳ ಪ್ರಕಾರ ಷರೀಷ್ ಅವರ ಮೆದುಳಿಗೆ ರಕ್ತ ಪರಿಚನೆ ಮಾಡುವ ಅಪಧಮನಿಗಳಲ್ಲಿ ಶೇ.88ರಷ್ಟು ರಕ್ತ ಹೆಪ್ಪುಗಟ್ಟಿರುವುದಾಗಿ ತಿಳಿಸಿದೆ. ಹೀಗಾಗಿಯೇ ಅಮೆರಿಕಾದಲ್ಲಿ ತಜ್ಞರನ್ನು ಸಂಪರ್ಕಿಸುವಂತೆ ಇಲ್ಲಿನ ವೈದ್ಯರು ಸಲಹೆ ನೀಡುತ್ತಿದ್ದಾರೆ. ಇದೀಗ ಷರೀಫ್ ಅವರನ್ನು ಸ್ಥಳಾಂತರ ಮಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com