ಪೌರತ್ವ (ತಿದ್ದುಪಡಿ) ಮಸೂದೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೆಂಡಾಮಂಡಲ! 

ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ದೇಶದಲ್ಲಿರುವವರಷ್ಟೇ ಅಲ್ಲದೇ ಪಾಕಿಸ್ತಾನವೂ ವಿರೋಧ ವ್ಯಕ್ತಪಡಿಸಿದೆ. 
ಪೌರತ್ವ (ತಿದ್ದುಪಡಿ) ಮಸೂದೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೆಂಡಾಮಂಡಲ!
ಪೌರತ್ವ (ತಿದ್ದುಪಡಿ) ಮಸೂದೆಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೆಂಡಾಮಂಡಲ!

ಇಸ್ಲಾಮಾಬಾದ್: ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದು, ದೇಶದಲ್ಲಿರುವವರಷ್ಟೇ ಅಲ್ಲದೇ ಪಾಕಿಸ್ತಾನವೂ ವಿರೋಧ ವ್ಯಕ್ತಪಡಿಸಿದೆ. 

ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಲ್ಲಿ ಮುಸ್ಲಿಮೇತರ, ಅಲ್ಪಸಂಖ್ಯಾತ ಸಮುದಾಯದ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡುವ ಉದ್ದೇಶ ಪೌರತ್ವ (ತಿದ್ದುಪಡಿ) ಮಸೂದೆಯದ್ದಾಗಿದೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಭಾರತದ ಪೌರತ್ವ ಮಸೂದೆಯನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ.  

ಪೌರತ್ವ ತಿದ್ದುಪಡಿ ಮಸೂದೆ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನು ಹಾಗೂ ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಒಪ್ಪಂದಗಳನ್ನು ಉಲ್ಲಂಘನೆ ಮಾಡುತ್ತದೆ ಎಂದು ಹೇಳಿದ್ದಾರೆ. 
  

ಮಸೂದೆ ಅಂಗೀಕಾರವಾಗಿರುವುದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ ಎಸ್ಎಸ್) ನ ಹಿಂದೂ ರಾಷ್ಟ್ರದ ಭಾಗ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com