ಸಿಎಬಿ ಪರಿಣಾಮಗಳನ್ನು ವಿಶ್ವಸಂಸ್ಥೆ ಸೂಕ್ಷ್ಮವಾಗಿ ಗಮನಿಸುತ್ತಿದೆ: ಗುಟೆರಸ್

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. 

Published: 13th December 2019 07:56 PM  |   Last Updated: 13th December 2019 07:56 PM   |  A+A-


cab-19

ಪೌರತ್ವ ಮಸೂದೆ ವಿರೋಧಿಸಿ ಪ್ರತಿಭಟನೆ

Posted By : Lingaraj Badiger
Source : UNI

ವಿಶ್ವಸಂಸ್ಥೆ: ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಸಂಭವನೀಯ ಪರಿಣಾಮಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ. 

ಭಾರತ ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ವಿಧೇಯಕದ ಬಗ್ಗೆ ಮಾಹಿತಿ ಇದೆ. ದೇಶದಲ್ಲಿ ವ್ಯಕ್ತವಾಗುವ ಪ್ರತಿಭಟನೆಯ ಬಗ್ಗೆಯೂ ಅರಿವಿದೆ.  ಈ ಶಾಸನದ ಸಂಭವನೀಯ ಪರಿಣಾಮಗಳನ್ನು ವಿಶ್ಲೇಷಿಸುತ್ತಿರುವುದಾಗಿ ಹೇಳಿದ್ದಾರೆ.

ಆಂಟೋನಿಯೊ ಗುಟೆರಸ್ ಅವರ ಉಪ ವಕ್ತಾರ ಫರ್ಹಾನ್ ಹಕ್ ಈ ವಿವರಗಳನ್ನು ತಿಳಿಸಿದ್ದಾರೆ. ಈ ಕಾನೂನಿನ ಸ್ವರೂಪದ  ಬಗ್ಗೆ ಮಾನವ ಹಕ್ಕುಗಳ ಸಂಸ್ಥೆಗಳು ಮತ್ತು ವಿಶ್ವಸಂಸ್ಥೆಯ ಪ್ರತಿನಿಧಿಗಳು ಕಳವಳ ವ್ಯಕ್ತಪಡಿಸಿದ್ದಾರೆ ಎಂದರು.
 
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರವಾದಾಗಿನಿಂದ  ಭಾರತದ  ಈಶಾನ್ಯ ರಾಜ್ಯಗಳು  ದೊಡ್ಡ ಪ್ರಮಾಣದ   ಪ್ರತಿಭಟನೆಗಳಿಗೆ  ಸಾಕ್ಷಿಯಾಗಿದೆ.
 
ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ವಲಸೆ ಬಂದ ಹಿಂದೂ, ಸಿಖ್, ಬೌದ್ಧ, ಜೈನ, ಪಾರ್ಸಿ ಮತ್ತು ಕ್ರಿಶ್ಚಿಯನ್ ನಿರಾಶ್ರಿತರಿಗೆ ಪೌರತ್ವ ಕಲ್ಪಿಸಲು ಹೊಸ ಕಾಯ್ದೆ ಅವಕಾಶ ನೀಡಲಿದೆ.

Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp