ಪೌರತ್ವ ಕಾಯ್ದೆ, ಕಾಶ್ಮೀರ ನಿರ್ಬಂಧದಿಂದ ಭಾರತೀಯ ಮುಸ್ಲಿಮರು ಪಾಕ್ ಗೆ ಪಲಾಯನ: ಇಮ್ರಾನ್ ಖಾನ್

ಹೊಸ ಪೌರತ್ವ ಕಾಯ್ದೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಬಂಧ ಅಥವಾ ಕರ್ಫ್ಯೂನಿಂದಾಗಿ ಲಕ್ಷಾಂತರ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.
ಇಮ್ರಾನ್ ಖಾನ್
ಇಮ್ರಾನ್ ಖಾನ್

ಜಿನೆವಾ: ಹೊಸ ಪೌರತ್ವ ಕಾಯ್ದೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿನ ನಿರ್ಬಂಧ ಅಥವಾ ಕರ್ಫ್ಯೂನಿಂದಾಗಿ ಲಕ್ಷಾಂತರ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ಪಲಾಯನ ಮಾಡುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಜೆನೆವಾದಲ್ಲಿ ನಿರಾಶ್ರಿತರ ಜಾಗತಿಕ ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ, ಭಾರತದ ಹೊಸ ಪೌರತ್ವ ಕಾಯ್ದೆ ಮತ್ತು ಕಾಶ್ಮೀರದಲ್ಲಿನ ನಿರ್ಬಂಧಗಳಿಂದಾಗಿ ಭಾರತೀಯ ಮುಸ್ಲಿಮರು ಪಾಕಿಸ್ತಾನಕ್ಕೆ ವಲಸೆ ಬರುವ ಸಾಧ್ಯತೆ ಇದ್ದು, ಇದರಿಂದ ನಮ್ಮ ದೇಶದಲ್ಲಿ ದೊಡ್ಡ ನಿರಾಶ್ರಿತರ ಬಿಕ್ಕಟ್ಟು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ನಮಗೆ ನಿರಾಶ್ರಿತರ ಬಿಕ್ಕಟ್ಟಿನ ಬಗ್ಗೆ ಮಾತ್ರವಲ್ಲದೆ ಎರಡು ಅಣು ರಾಷ್ಟ್ರಗಳ ನಡುವೆ ದೊಡ್ಡ ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಆತಂಕ ನಮ್ಮನ್ನು ಕಾಡುತ್ತಿದೆ ಎಂದು ಇಮ್ರಾನ್ ಖಾನ್ ಹೇಳಿರುವುದಾಗಿ ರಾಯಟರ್ಸ್ ವರದಿ ಮಾಡಿದೆ.

ಅತಿ ಹೆಚ್ಚು ನಿರಾಶ್ರಿತರಿಗೆ ಆಶ್ರಯ ನೀಡುವ ಸಾಮರ್ಥ್ಯ ನಮ್ಮ ದೇಶಕ್ಕೆ ಇಲ್ಲ. ಹೀಗಾಗಿ ಈ ವಿಚಾರದಲ್ಲಿ ವಿಶ್ವ ಸಮುದಾಯ ಮಧ್ಯ ಪ್ರವೇಶಿಸಬೇಕು ಎಂದು ಪಾಕ್ ಪ್ರಧಾನಿ ಒತ್ತಾಯಿಸಿದ್ದಾರೆ.

ಈ ಮುಂಚೆ, ಕಳೆದ ಡಿಸೆಂಬರ್ 12ರಂದು ಭಾರತದ ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿದ್ದ ಇಮ್ರಾನ್ ಖಾನ್, ಇದು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನನ್ನು ಉಲ್ಲಂಘಿಸುತ್ತದೆ. ಅಲ್ಲದೆ ಎರಡು ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ದೂರಿದ್ದರು.

ಇದೇ ವೇಳೆ ಬಿಜೆಪಿ ಹಾಗೂ ಆರ್‌ಎಸ್ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಪಾಕ್ ಪ್ರಧಾನಿ, ಪೌರತ್ವ ಮಸೂದೆಯು ಹಿಂದೂ ರಾಷ್ಟ್ರದ ಭಾಗವಾಗಿದೆ. ಅದೇ ರೀತಿಯಾಗಿ ಇದನ್ನು ನಿರ್ಮಿಸಲಾಗಿದೆ ಎಂದು ಹರಿಹಾಯ್ದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com