ಪುಲ್ವಾಮಾ ಭಯೋತ್ಪಾದಕ ದಾಳಿ; ಭಾರತದ ಬೆದರಿಕೆಯನ್ನು ಖಂಡಿಸಿ ಪಾಕಿಸ್ತಾನ ಸೆನೆಟ್ ನಿರ್ಣಯ ಜಾರಿ

ಪಾಕಿಸ್ತಾನ ಸಂಸತ್ತಿನ ಮೇಲ್ಮನೆ)ಸೆನೆಟ್) ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ಭಾರತದ ಬೆದರಿಕೆ...
ಪಾಕಿಸ್ತಾನ ಸೆನೆಟ್
ಪಾಕಿಸ್ತಾನ ಸೆನೆಟ್
ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್ತಿನ ಮೇಲ್ಮನೆ)ಸೆನೆಟ್) ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ಭಾರತದ ಬೆದರಿಕೆಯನ್ನು ಖಂಡಿಸುವ ನಿರ್ಣಯವನ್ನು ಅವಿರೋಧವಾಗಿ ಅನುಮೋದಿಸಿದೆ.
ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕಳೆದ ಫೆಬ್ರವರಿ 14ರಂದು 40ಕ್ಕೂ ಅಧಿಕ ಸಿಆರ್ ಪಿಎಫ್ ಯೋಧರ ಮೇಲೆ ಜೈಶ್ ಎ ಮೊಹಮ್ಮದ್ ಸಂಘಟನೆಯ ಭಯೋತ್ಪಾದಕ ಆತ್ಮಾಹುತಿ ದಾಳಿ ನಡೆಸಿ ಕೊಂದು ಹಾಕಿದ ನಂತರ ಭಾರತ ಇದನ್ನು ತೀವ್ರವಾಗಿ ಖಂಡಿಸಿದ್ದಲ್ಲದೆ ಪಾಕಿಸ್ತಾನಕ್ಕೆ ಹೋಗುತ್ತಿದ್ದ ಕೆಲವು ಸೌಕರ್ಯಗಳನ್ನು ಕೂಡ ನಿಲ್ಲಿಸಿತ್ತು. ಇದೀಗ ಭಾರತ ಮತ್ತು ಪಾಕಿಸ್ತಾನದ ಸ್ಥಿತಿ ಉದ್ವಿಗ್ನವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಕೃತ್ಯಕ್ಕೆ ಪಾಕ್ ಮೇಲೆ ಖಂಡನೆ ವ್ಯಕ್ತವಾಗಿದೆ.
ಆದರೆ ಭಾರತ ಯಾವುದೇ ಸಾಕ್ಷಿಗಳಿಲ್ಲದೆ ತಮ್ಮ ಮೇಲೆ ವೃಥಾ ಆರೋಪ ಮಾಡುತ್ತಿದೆ. ಶಾಂತಿ ಮಾತುಕತೆಗೆ ನಾವು ಸಿದ್ದರಿದ್ದೇವೆ ಎಂದು ಹೇಳಿಕೊಂಡು ಬರುತ್ತಿದೆ. ಭಾರತ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿತ್ತು. ಇದೀಗ ನಿನ್ನೆ ಪಾಕಿಸ್ತಾನ ಸಂಸತ್ತಿನ ಮೇಲ್ಮನೆಯಲ್ಲಿ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ ನ ರಾಜಾ ಜಫರ್ ಉಲ್ ಹಖ್ ನಿರ್ಣಯವನ್ನು ಮಂಡಿಸಿದರು. ಅದಕ್ಕೆ ಅವಿರೋಧ ಬೆಂಬಲ ಸಿಕ್ಕಿ ಅನುಮೋದನೆಯಾಗಿದೆ.
ಪುಲ್ವಾಮಾ ದಾಳಿ ತನಿಖೆಯಲ್ಲಿ ಭಾರತಕ್ಕೆ ನೆರವು ನೀಡಲು ಸಿದ್ಧರಿದ್ದೇವೆ ಎಂದು ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದರೂ ಕೂಡ ಭಾರತ ಅದನ್ನು ಸ್ವೀಕರಿಸುತ್ತಿಲ್ಲ ಎಂದು ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com