ಪಂಜಾಬ್, ಖೈಬರ್ ಪ್ರಾಂತ್ಯದಲ್ಲಿ ವಿಮಾನ ಸೇವೆ ರದ್ದುಗೊಳಿಸಿದ ಪಾಕ್

ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಎಲ್ಲಾ ದೇಶಿಯ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಲಾಹೋರ್: ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಪಂಜಾಬ್ ಮತ್ತು ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಭಾರತೀಯ ವಾಯುಪಡೆ ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಬೆನ್ನಲ್ಲೇ ಪಾಕಿಸ್ತಾನದ ಲಾಹೋರ್​, ಮುಲ್ತಾನ್​, ಇಸ್ಲಾಮಾಬಾದ್​, ಫೈಸಲಾಬಾದ್​, ಸಿಯಾಲ್​ಕೋಟ್​ ವಿಮಾನ ನಿಲ್ದಾಣದಿಂದ ಎಲ್ಲ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.
ಪಾಕ್ ನಾಗರಿಕ ವಿಮಾನಯಾನ ಪ್ರಾಧಿಕಾರದ ಆದೇಶದ ಹಿನ್ನೆಲೆಯಲ್ಲಿ ಬಚಖಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಬೇಕಿದ್ದ ಪ್ರಯಾಣಿಕ ವಿಮಾನವನ್ನು ತಡೆಯಲಾಗಿದೆ.
ಇಂದು ಬೆಳಗ್ಗೆ ಪಾಕಿಸ್ತಾನದ ಮೂರು ಯುದ್ಧ ವಿಮಾನಗಳು ಭಾರತದ ಗಡಿ ಉಲ್ಲಂಘಿಸಿದ್ದವು. ಪಾಕ್​ ವಿಮಾನಗಳನ್ನು ಹಿಮ್ಮೆಟ್ಟಿಸಿದ ಭಾರತ, ಒಂದು ವಿಮಾನವನ್ನು ಹೊಡೆದುರುಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com