ಆಸ್ಟ್ರೇಲಿಯಾ ಭಾರತೀಯ ರಾಯಭಾರಿ ಕಚೇರಿಗೆ ಅನುಮಾನಾಸ್ಪದ ವಸ್ತು ರವಾನೆ, ಆತಂಕ ಸೃಷ್ಟಿ

ಆಸ್ಟ್ರೇಲಿಯಾದ ಮೆಲ್ಬರ್ನ್'ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಅನುಮಾನಾಸ್ಪದ ವಸ್ತುಗಳು ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ವರದಿಗಳು ತಿಳಿಸಿವೆ...
ಆಸ್ಟ್ರೇಲಿಯಾ ಭಾರತೀಯ ರಾಯಭಾರಿ ಕಚೇರಿಗೆ ಅನುಮಾನಾಸ್ಪದ ವಸ್ತು ರವಾನೆ: ಆತಂಕದ ವಾತಾವರಣ ನಿರ್ಮಾಣ
ಆಸ್ಟ್ರೇಲಿಯಾ ಭಾರತೀಯ ರಾಯಭಾರಿ ಕಚೇರಿಗೆ ಅನುಮಾನಾಸ್ಪದ ವಸ್ತು ರವಾನೆ: ಆತಂಕದ ವಾತಾವರಣ ನಿರ್ಮಾಣ
ಮೆಲ್ಬರ್ನ್: ಆಸ್ಟ್ರೇಲಿಯಾದ ಮೆಲ್ಬರ್ನ್'ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಅನುಮಾನಾಸ್ಪದ ವಸ್ತುಗಳು ಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ವರದಿಗಳು ತಿಳಿಸಿವೆ. 
ಇದೇ ರೀತಿಯ ಅನುಮಾನಾಸ್ಪದ ವಸ್ತುಗಳು ಅಮೆರಿಕಾ, ಬ್ರಿಟೀಷ್, ಸ್ವಿಸ್, ಜರ್ಮನ್ ರಾಯಭಾರಿ ಕಚೇರಿಗಳಿಗೂ ರವಾನೆಯಾಗಿದ್ದು, ಸ್ಥಳಕ್ಕಾಗಮಿಸಿರುವ ಭದ್ರತಾಧಿಕಾರಿಗಳು ಸ್ಥಳದಲ್ಲಿ ತೀವ್ರ ತಪಾಸಣೆ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ. 
ಸ್ಥಳವನ್ನು ಪರಿಶೀಲನೆ ನಡೆಸುತ್ತಿರುವ ಭದ್ರತಾ ಸಿಬ್ಬಂದಿಗಳು ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. 
ಅನುಮಾನಾಸ್ಪದ ವಸ್ತುಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಪ್ರಸ್ತುತ ಸ್ಥಳದ ಸುತ್ತಲೂ ಭದ್ರತಾ ಸಿಬ್ಬಂದಿಗಳು ಸುತ್ತುವರೆದಿದ್ದು, ಆತಂಕದ ವಾತಾವರಣ ಸೃಷ್ಟಿಗೊಂಡಿದೆ ಎಂದು ವರದಿಗಳು ತಿಳಿಸಿವೆ. 
ಅನುಮಾನಾಸ್ಪದ ವಸ್ತುಗಳು ಬಂದಿರುವ ಹಿನ್ನಲೆಯಲ್ಲಿ ಥಾಯ್, ಗ್ರೀಕ್, ಈಜಿಪ್ಟ್ ಹಾಗೂ ಜಪಾನ್ ರಾಯಭಾರಿ ಕಚೇರಿಗಳಿಗೂ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಪರಿಸ್ಥಿತಿ ಕುರಿತಂತೆ ಆಸ್ಟ್ರೇಲಿಯಾ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಎಲ್ಲಾ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆಂದು ಬ್ರಿಟೀಷ್ ರಾಯಭಾರಿ ಕಚೇರಿ ವಕ್ತಾರ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com