ಚಿಲಿ ಕರಾವಳಿಯಲ್ಲಿ ಪ್ರಬಲ ಭೂಕಂಪನ, ಕನಿಷ್ಠ 2 ಸಾವು, ಹಲವರು ನಾಪತ್ತೆ

ಚಿಲಿ ದೇಶದ ಕರಾವಳಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಸ್ಯಾಂಟಿಯಾಗೋ: ಚಿಲಿ ದೇಶದ ಕರಾವಳಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪನದಿಂದಾಗಿ ಕನಿಷ್ಠ ಇಬ್ಬರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿಸಂಸ್ಥೆ ವರದಿ ಮಾಡಿರುವಂತೆ ಚಿಲಿ ದೇಶದ ಕರಾವಳಿಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ದಾಖಲಾಗಿದೆ. ಮಧ್ಯ ಚಿಲಿಯ ಕೊಕ್ವಿಬೋ ಪ್ರಾಂತ್ಯದ ಸಮೀಪದಲ್ಲೇ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದ್ದು, ಭೂಕಂಪನದ ತೀವ್ರತೆಗೆ ಸಮೀಪದ ಹಲವು ಕಟ್ಟಡಗಳು ನೆಲಕ್ಕುರಳಿವೆ.
ಘಟನೆಯಲ್ಲಿ ಕನಿಷ್ಠ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿ, ಕಟ್ಟಡದ ಅವಶೇಷಗಳಡಿಯಲ್ಲಿ ಹಲವರು ಸಿಲುಕಿದ್ದಾರೆ ಎಂದು ತಿಳಿದುಬದಿಂದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಇನ್ನು ಭೂಕಂಪನದ ಬಳಿಕ ಇದೇ ಪ್ರಾಂತ್ಯದಲ್ಲಿ ಸಮಾರು ನಿಮಿಷಗಳ 4 ರಿಂದ 4.5 ರಷ್ಟು ಲಘು ಭೂಕಂಪನಗಲೂ ಸಂಭವಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com