ಇಂದು ಎರಡು ಮಹಾ ತೀರ್ಪಿಗೆ ವೇದಿಕೆ ಸಿದ್ಧ: ಕುಲಭೂಷಣ್ ಜಾಧವ್ ಭವಿಷ್ಯ ನಿರ್ಧಾರ ಸಾಧ್ಯತೆ!

ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಇಂದು ಹೊರ ಬೀಳುವ ಸಾಧ್ಯತೆ ಇದೆ. ವಾದ ಪ್ರತಿವಾದ ಆಲಿಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.
ಕುಲಭೂಷಣ್ ಜಾಧವ್
ಕುಲಭೂಷಣ್ ಜಾಧವ್
ಹೇಗ್: ಮಾಜಿ ನೌಕಾಧಿಕಾರಿ ಕುಲಭೂಷಣ್ ಜಾಧವ್ ಪ್ರಕರಣದ ತೀರ್ಪು ಇಂದು ಹೊರ ಬೀಳುವ ಸಾಧ್ಯತೆ ಇದೆ. ವಾದ ಪ್ರತಿವಾದ ಆಲಿಸಿರುವ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. 
ಕುಲಭೂಷಣ್ ಜಾಧವ್ ಗೆ ಗೂಢಚಾರಿ ಹಾಗೂ ಉಗ್ರವಾದ ಆರೋಪದ ಮೇಲೆ ಪಾಕಿಸ್ತಾನ ಮಿಲಿಟರಿ ನ್ಯಾಯಾಲಯ ಮರಣದಂಡನೆಯನ್ನು ವಿಧಿಸಿತ್ತು. ಇದು ಭಾರತ ಮತ್ತು ಪಾಕಿಸ್ತಾನ ನಡುವೆ ಶೀತಲ ಸಮರಕ್ಕೆ ನಾಂದಿ ಹಾಡಿತ್ತು. 
ಇನ್ನು ಪಾಕಿಸ್ತಾನ ತೀರ್ಪು ವಿರುದ್ಧ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಮೊರೆ ಹೋಗಿತ್ತು. ಈ ಪ್ರಕರಣದ ವಿಚಾರಣೆ ಐಸಿಜೆಯ ಹೇಗ್ ಕೇಂದ್ರ ಕಚೇರಿಯಲ್ಲಿ ಕಳೆದ ಫೆಬ್ರವರಿ 18ರಂದು ಆರಂಭಗೊಂಡಿತ್ತು. 
ಇನ್ನು ಬುಧವಾರ ಎರಡು ಮಹಾ ತೀರ್ಪು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಕರ್ನಾಟಕದ ಅತೃಪ್ತ ಶಾಸಕರ ರಾಜಿನಾಮೆ ಪ್ರಕರಣ ಹಾಗೂ ಕುಲಭೂಷಣ್ ಜಾಧವ್ ಪ್ರಕರಣ ಒಂದೇ ದಿನ ತೀರ್ಪು ಬರಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com