ಕಾಶ್ಮೀರ ಮಾತುಕತೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಇಮ್ರಾನ್ ಖಾನ್ ಗೆ ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್-ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭೇಟಿ ಮಾಡಿದ್ದು, ಕಾಶ್ಮೀರ ವಿಷಯದಲ್ಲಿ ತಾವು ಮಧ್ಯಸ್ಥಿಕೆ ವಹಿಸುವ ಪ್ರಸ್ತಾವನೆ ಮುಂದಿಟ್ಟಿದ್ದಾರೆ.
ಕಾಶ್ಮೀರ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಇಮ್ರಾನ್ ಖಾನ್ ಗೆ ಟ್ರಂಪ್
ಕಾಶ್ಮೀರ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸಲು ಸಿದ್ಧ: ಇಮ್ರಾನ್ ಖಾನ್ ಗೆ ಟ್ರಂಪ್
ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್-ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭೇಟಿ ಮಾಡಿದ್ದು, ಕಾಶ್ಮೀರ ವಿಷಯದಲ್ಲಿ ತಾವು ಮಧ್ಯಸ್ಥಿಕೆ ವಹಿಸುವ ಪ್ರಸ್ತಾವನೆ ಮುಂದಿಟ್ಟಿದ್ದಾರೆ. 
ಭಾರತ-ಪಾಕ್ ಒಪ್ಪಿದರೆ ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಿದ್ಧ, ನಾನು ಸಹಾಯ ಮಾಡಬಹುದಾದರೆ, ಮಧ್ಯಸ್ಥಿಕೆ ವಹಿಸಲು ಇಚ್ಛಿಸುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. 
ಪಾಕ್ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಇಮ್ರಾನ್ ಖಾನ್ ಶ್ವೇತ ಭವನಕ್ಕೆ ಭೇಟಿ ನೀಡಿ ಡೊನಾಲ್ಡ್ ಟ್ರಂಪ್ ಜೊತೆ ಮಾತುಕತೆ ನಡೆಸಿದ್ದಾರೆ. ಕಾಶ್ಮೀರ ಸಮಸ್ಯೆಗೆ ಮಧ್ಯಸ್ಥಿಕೆ ವಹಿಸಲು ಆಸಕ್ತಿ ತೋರಿದ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಯನ್ನು ಇಮ್ರಾನ್ ಖಾನ್ ಸ್ವಾಗತಿಸಿದ್ದಾರೆ. ಇದೇ ವೇಳೆ ಟ್ರಂಪ್-ಇಮ್ರಾನ್ ಖಾನ್ ಅಫ್ಘಾನಿಸ್ಥಾನ ಶಾಂತಿ ಪ್ರಕ್ರಿಯೆ ಬಗ್ಗೆಯೂ ಮಾತನಾಡಿದ್ದು, ಈ ಪ್ರದೇಶದಲ್ಲಿ ಅಮೆರಿಕ ಪೊಲೀಸ್ ಗಿರಿ ಮಾಡುವುದನ್ನು ಮುಂದುವರೆಸುವುದಕ್ಕೆ ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ. 
ಕಾಶ್ಮೀರ ಸಮಸ್ಯೆಯನ್ನು ದ್ವಿಪಕ್ಷೀಯ ಸಮಸ್ಯೆ ಎಂಬುದು ಭಾರತದ ನಿಲುವಾಗಿದ್ದು, ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಜಾಗವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com