ಚೀನಾದಲ್ಲಿ ಭೂ ಕುಸಿತ: ಸಾವನ್ನಪ್ಪಿದವರ ಸಂಖ್ಯೆ 15ಕ್ಕೇರಿಕೆ

ನೈರುತ್ಯ ಚೀನಾದ ಗುಯಿಜೊವು ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಚೀನಾದಲ್ಲಿ ಭೂಕುಸಿತ
ಚೀನಾದಲ್ಲಿ ಭೂಕುಸಿತ
ಗುಯಾಂಗ್: ನೈರುತ್ಯ ಚೀನಾದ ಗುಯಿಜೊವು ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ 15 ಜನರು ಮೃತಪಟ್ಟಿದ್ದು, ಇನ್ನೂ 50 ಜನರನ್ನು ರಕ್ಷಿಸಲಾಗಿದೆ. ಸುಮಾರು 38 ಜನರು ಕಾಣೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಘಟನಾ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಈ ವರೆಗೂ 13 ಶವಗಳನ್ನು ಹೊರತೆಗೆಯಲಾಗಿದೆ.
ಮಂಗಳವಾರ ರಾತ್ರಿ ಲಿಯುಪನ್ಶುಯಿ ನಗರದ ಶುಚೆಂಗ್ ಕೌಂಟಿಯ ಒಂದು ಹಳ್ಳಿಯಲ್ಲಿ ಭೂಕುಸಿತ ಉಂಟಾದ ಪರಿಣಾಮ ಸುಮಾರು 21 ಮನೆಗಳು ಧರೆಗುರುಳಿವೆ. ಭೂಕುಸಿತ ಸಂಭವಿಸಿದಾಗ ಈ ಪ್ರದೇಶದಲ್ಲಿ 50 ಕ್ಕೂ ಹೆಚ್ಚು ಜನರು ಇದ್ದರು ಎಂದು ರಕ್ಷಣಾ ಕಾರ್ಯಕರ್ತರು ತಿಳಿಸಿದ್ದಾರೆ. ಸುಮಾರು 1 ಸಾವಿರಕ್ಕೂ ಅಧಿಕ ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com