ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರ ಅಟ್ಟಹಾಸ; ತ್ರಿವಳಿ ಸ್ಫೋಟ, ಕನಿಷ್ಛ 5 ಮಂದಿ ಸಾವು

ನೆರೆಯ ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಕಾಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

Published: 25th July 2019 12:00 PM  |   Last Updated: 25th July 2019 11:10 AM   |  A+A-


5 civilians killed and 10 wounded in three explosions in Kabul, Afghanistan

ಕಾಬುಲ್ ಸ್ಫೋಟ (ಸಂಗ್ರಹ ಚಿತ್ರ)

Posted By : SVN SVN
Source : UNI
ಕಾಬುಲ್: ನೆರೆಯ ಆಫ್ಘಾನಿಸ್ತಾನದಲ್ಲಿ ಮತ್ತೆ ಉಗ್ರರು ತಮ್ಮ ಅಟ್ಟಹಾಸ ಮೆರೆದಿದ್ದು, ರಾಜಧಾನಿ ಕಾಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಆಫ್ಘಾನಿಸ್ತಾನದ ರಾಜಧಾನಿ ಕಾಬುಲ್ ನ ಮಕ್ರೋರಯಾನ್ ಪ್ರಾಂತ್ಯದಲ್ಲಿರುವ ಗಣಿಗಾರಿಕೆ ಮತ್ತು ಪೆಟ್ರೋಲಿಯಂ ಸಚಿವಾಲಯವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಸತತ ಮೂರು ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಫೋಟದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಆಫ್ಘಾನಿಸ್ತಾನದ ಆಂತರಿಕ ಸಚಿವಾಲಯ ಕೂಡ ಸ್ಪಷ್ಟನೆ ನೀಡಿದ್ದು ಇಂದು ನಡೆದ ಆತ್ಮಹತ್ಯಾ ದಾಳಿಯಲ್ಲಿ ಕನಿಷ್ಠ 5 ಮಂದಿ ಸಾವಿಗೀಡಾಗಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ಉಗ್ರರು ಈ ದಾಳಿ ನಡೆಸಿದ್ದಾರೆ. ಗಣಿಗಾರಿಕೆ ಮತ್ತು ಪೆಟ್ರೋಲಿಯಂ ಸಚಿವಾಲಯವೇ ಉಗ್ರ ಟಾರ್ಗೆಟ್ ಆಗಿರುವ ಶಂಕೆ ಇದೆ ಎಂದು ಮಾಹಿತಿ ನೀಡಿದೆ.
Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
Poll
Coronavirus Lockdown

ಕರ್ಫ್ಯೂ, ಭಾನುವಾರದ ಲಾಕ್ ಡೌನ್ ನಿಂದ ರಾಜ್ಯದಲ್ಲಿ ಕೊರೋನಾ ಪ್ರಮಾಣ ತಗ್ಗಲಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
facebook twitter whatsapp