ಭಾರತ- ಪಾಕಿಸ್ತಾನ ಪರಸ್ಪರ ಮಾತುಕತೆ ಮೂಲಕ ಕಾಶ್ಮೀರ ವಿವಾದ ಬಗೆಹರಿಸಿಕೊಳ್ಳಿ- ಚೀನಾ

ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾಶ್ಮೀರ ವಿವಾದವನ್ನು ಪರಸ್ಪರ ಮಾತುಕತೆ ಮೂಲಕ ಶಾಂತಯುತವಾಗಿ ಬಗೆಹರಿಕೊಳ್ಳಿಸುವಂತೆ ಚೀನಾ ಸಲಹೆ ನೀಡಿದೆ.
ಚೀನಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್
ಚೀನಾ ಅಧ್ಯಕ್ಷ ಕ್ಸಿ- ಜಿನ್ ಪಿಂಗ್
ಬೀಜಿಂಗ್ : ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾಶ್ಮೀರ ವಿವಾದವನ್ನು ಪರಸ್ಪರ ಮಾತುಕತೆ ಮೂಲಕ ಶಾಂತಯುತವಾಗಿ  ಬಗೆಹರಿಕೊಳ್ಳಿಸುವಂತೆ ಚೀನಾ ಸಲಹೆ ನೀಡಿದೆ. 
 ಉಭಯ ದೇಶಗಳ ನಡುವಿನ ಸಂಬಂಧ ವೃದ್ದಿಯಲ್ಲಿ ಪ್ರಮುಖ ಪಾತ್ರ ವಹಿಸುವ ಅಮೆರಿಕಾ ಸೇರಿದಂತೆ ಇತರ ಅಂತಾರಾಷ್ಟ್ರೀಯ ಸಮುದಾಯಕ್ಕೆ ಬೆಂಬಲ ನೀಡುವುದಾಗಿ ಚೀನಾ ಪ್ರತಿಕ್ರಿಯಿಸಿದೆ.
ಶ್ವೇತಭವನದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜೊತೆಗಿನ ಸಭೆಯಲ್ಲಿ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸುವ ಅವಕಾಶವನ್ನು  ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಬೆನ್ನಲ್ಲೇ ಚೀನಾ ಈ ರೀತಿ ಪ್ರತಿಕ್ರಿಯೆ ನೀಡಿದೆ.
ನೆರೆಯ ರಾಷ್ಟ್ರಗಳಾದ ಚೀನಾ ಹಾಗೂ ಪಾಕಿಸ್ತಾನ ನಡುವೆ ಸೌಹಾರ್ದತೆ ಏರ್ಪಟ್ಟು, ಉಭಯ ದೇಶಗಳ ನಡುವೆ ಉತ್ತಮ ವಾತಾವರಣ ಮೂಡಲಿದೆ ಎಂಬ ವಿಶ್ವಾಸವಿರುವುದಾಗಿ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಹ್ಯೂ ಚುಂಯಿಂಗ್ ಹೇಳಿದ್ದಾರೆ.
ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಉಭಯ ದೇಶಗಳು ಶಾಂತಿಯುತವಾಗಿ ಬಗೆಹರಿಸಿಕೊಂಡು ದಕ್ಷಿಣ ಏಷ್ಯಾದಲ್ಲಿ ಶಾಂತಿ ಹಾಗೂ ಸುಭದ್ರತೆ ನೆಲೆಸಲಿದೆ ಎಂಬ ವಿಶ್ವಾಸ ಇರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಪಾನಿನ ಒಸಾಕದಲ್ಲಿ ಇತ್ತೀಚಿಗೆ ನಡೆದ ಜಿ-20 ಶೃಂಗಸಭೆಯಲ್ಲಿ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಕೋರಿದ್ದರು ಎಂಬ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಇತ್ತೀಚಿಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. 
ಆದರೆ, ಈ ಟ್ರಂಪ್   ಅವರ ಈ  ಹೇಳಿಕೆಯನ್ನು ಭಾರತ ನಿರಾಕರಿಸಿತ್ತು,  ಪ್ರಧಾನಿ ಇಂತಹ ಪ್ರಸ್ತಾವವನ್ನು ಮಾಡಿಲ್ಲ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸಮರ್ಥಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com