2022ರ ವೇಳೆಗೆ ನಾವೂ ಕೂಡ ಬಾಹ್ಯಾಕಾಶಕ್ಕೆ ಮಾನವನ ಕಳುಹಿಸುತ್ತೇವೆ: ಪಾಕ್ ಸಚಿವ ಫವಾದ್ ಚೌದರಿ

ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಗುರುವಾರ ಘೋಷಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಇಸ್ಲಾಮಾಬಾದ್: ಪಾಕಿಸ್ತಾನ 2022ರಲ್ಲಿ ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸಲಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಫವಾದ್ ಚೌಧರಿ ಗುರುವಾರ ಘೋಷಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿದ ಅವರು, '' ಫೆಬ್ರವರಿ 2020ರಿಂದ ಪಾಕಿಸ್ತಾನವು ಬಾಹ್ಯಾಕಾಶಕ್ಕೆ ಮೊದಲ ಮಾನವನನ್ನು ಕಳುಹಿಸುವ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಘೋಷಿಸುತ್ತಿರುವುದಕ್ಕೆ ಹೆಮ್ಮೆ ಆಗುತ್ತಿದೆ" ಎಂದು ಅವರು ಬರೆದುಕೊಂಡಿದ್ದಾರೆ. ಮೊದಲ ಹಂತವಾಗಿ 50 ಜನರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ಆ ಸಂಖ್ಯೆಯನ್ನು 25ಕ್ಕೆ ಇಳಿಸಲಾಗುವುದು. 2022 ರಲ್ಲಿ ನಾವು ಪಾಕಿಸ್ತಾನದ ಮೊದಲ ವ್ಯಕ್ತಿಯನ್ನು ಬಾಹ್ಯಾಕಾಶಕ್ಕೆ ಕಳುಹಿಸಲಿದ್ದೇವೆ ಎಂದು ಹೇಳಿದ್ದಾರೆ.
'ಪಾಕಿಸ್ತಾನ ವಾಯುಪಡೆಯ ಮೂಲಕ 50 ಜನರನ್ನು 2020 ರ ಫೆಬ್ರವರಿಯಲ್ಲಿ ಆಯ್ಕೆ ಮಾಡಲಾಗುವುದು. ಆ ನಂತರ ಅವರಿಗೆ ತರಬೇತಿ ನೀಡಿ, ಓರ್ವ ಗಗನಯಾತ್ರಿಯನ್ನು ಆಯ್ಕೆ ಮಾಡಲಾಗುವುದು. ಆತನನ್ನು ಅಂತರಿಕ್ಷಕ್ಕೆ ಕಳುಹಿಸಲಾಗುವುದು. ಇದು ದೇಶದ ಅತಿದೊಡ್ಡ ಬಾಹ್ಯಾಕಾಶ ಯೋಜನೆಯಾಗಲಿದೆ' ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com