ಪರಸ್ಪರ ಚರ್ಚೆ ಮೂಲಕ ಕಾಶ್ಮೀರ ಸಮಸ್ಯೆ ಪರಿಹರಿಸಿಕೊಳ್ಳೋಣ: ಪ್ರಧಾನಿ ಮೋದಿಗೆ ಇಮ್ರಾನ್ ಖಾನ್ ಪತ್ರ

ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಇಸ್ಲಾಮಾಬಾದ್​: ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಪತ್ರದಲ್ಲಿ 'ಭಾರತ ಮತ್ತು ಪಾಕಿಸ್ತಾನ ನಡುವೆ ಇರುವ ಎಲ್ಲಾ ಬಗೆಯ ವಿವಾದಗಳು, ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ. 
ಈ ಕುರಿತು ಪಾಕಿಸ್ತಾನದ ಪತ್ರಿಕೆಗಳೂ ಕೂಡ ವರದಿ ಮಾಡಿದ್ದು, 'ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮೂಡುವಂತೆ ಮಾಡಲು ಪಾಕ್​ ಬದ್ಧವಾಗಿದೆ. ಆದ್ದರಿಂದ ಈ ವಿಷಯವಾಗಿ ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ' ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಅಂತೆಯೇ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರನ್ನು ಪತ್ರದಲ್ಲಿ ಮತ್ತೊಮ್ಮೆ ಅಭಿನಂಧಿಸಿರುವ ಇಮ್ರಾನ್ ಖಾನ್, 'ಕಾಶ್ಮೀರ ಸೇರಿ ಎಲ್ಲ ವಿವಾದಗಳನ್ನು ಪರಿಹರಿಸಿಕೊಳ್ಳಲು ಪಾಕ್​ ಉತ್ಸುಕವಾಗಿದೆ' ಎಂದು ಹೇಳಿದ್ದಾರೆ.
ಚೀನಾದಲ್ಲಿ ನಿಗದಿಯಾಗಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್​ಸಿಒ) ಶೃಂಗ ಸಭೆಯ ಸಂದರ್ಭದಲ್ಲಿ ಪಾಕ್​ ಜತೆ ದ್ವಿಪಕ್ಷೀಯ ಮಾತುಕತೆ ಮಾಡುವುದಿಲ್ಲ. ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಅನೌಪಚಾರಿಕವಾಗಿಯೂ ಭೇಟಿಯಾಗುವುದಿಲ್ಲ ಎಂದು ಭಾರತ ಹೇಳಿದ ಬೆನ್ನಲ್ಲೇ ಈ ಒಂದು ವಿದ್ಯಮಾನ ಕಂಡುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com