ಪಾಕ್ ಪುಲ್ವಾಮ ದಾಳಿಕೋರರ ವಿರುದ್ಧ ಕಠಿಣ ಕ್ರಮದ ಭರವಸೆ ನೀಡಿದೆ: ಅಮೆರಿಕ

ಪುಲ್ವಾಮ ದಾಳಿಕೋರರೂ ಸೇರಿದಂತೆ ಪಾಕಿಸ್ತಾನದಲ್ಲಿರುವ ಎಲ್ಲ ಉಗ್ರರ ವಿರುದ್ಧವೂ ಪಾಕಿಸ್ತಾನ ಸರ್ಕಾರ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದೆ ಎಂದು ಅಮೆರಿಕ ಹೇಳಿದೆ.

Published: 12th March 2019 12:00 PM  |   Last Updated: 12th March 2019 12:26 PM   |  A+A-


Pakistan assures US to deal 'firmly' with terrorists, says john bolton

ಸಂಗ್ರಹ ಚಿತ್ರ

Posted By : SVN SVN
Source : PTI
ವಾಷಿಂಗ್ಟನ್‌: ಪುಲ್ವಾಮ ದಾಳಿಕೋರರೂ ಸೇರಿದಂತೆ ಪಾಕಿಸ್ತಾನದಲ್ಲಿರುವ ಎಲ್ಲ ಉಗ್ರರ ವಿರುದ್ಧವೂ ಪಾಕಿಸ್ತಾನ ಸರ್ಕಾರ ಕಠಿಣ ಕ್ರಮ ಜರುಗಿಸುವ ಭರವಸೆ ನೀಡಿದೆ ಎಂದು ಅಮೆರಿಕ ಹೇಳಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಅವರು, 'ಎಲ್ಲ ಉಗ್ರರ ವಿರುದ್ಧ ಕಠಿಣವಾಗಿ ನಡೆದುಕೊಳ್ಳಲಾಗುತ್ತದೆ ಹಾಗೂ ಭಾರತದೊಂದಿಗಿನ ಆತಂಕದ ವಾತಾವರಣ ಶಮನಗೊಳಿಸಲು ಸೂಕ್ತ ಕ್ರಮವಹಿಸಲಾಗುತ್ತದೆ ಎಂದು ಪಾಕಿಸ್ತಾನ ಭರವಸೆ ನೀಡಿದೆ ಎಂದು ಹೇಳಿದ್ದಾರೆ.

'ಪಾಕಿಸ್ತಾನದ ವಿದೇಶಾಂಗ ಸಚಿವ ಖುರೇಶಿ ಅವರೊಂದಿಗೆ ಮಾತನಾಡಿದ್ದು, ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿರುವ ಜೈಷ್ ಎ ಮೊಹಮ್ಮದ್‌ ಹಾಗೂ ಇತರೆ ಉಗ್ರ ಸಂಘಟನೆಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಪ್ರಸ್ತಾಪಿಸಿದ್ದೇನೆ. ಎಲ್ಲ ಉಗ್ರರ ವಿರುದ್ಧ ದೃಢವಾದ ಕ್ರಮ ತೆಗೆದುಕೊಳ್ಳುವುದಾಗಿ ವಿದೇಶಾಂಗ ಸಚಿವ ಭರವಸೆ ನೀಡಿದ್ದಾರೆ. ಭಾರತದೊಂದಿಗಿನ ಆತಂಕದ ವಾತಾವರಣ ಶಮಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ಸಾಗಲಿದೆ' ಎಂದಿರುವುದಾಗಿ ಬೋಲ್ಟನ್‌ ಹೇಳಿದ್ದಾರೆ. 

ಭಾರತದ ವಿದೇಶಾಂಗ ಕಾರ್ಯದರ್ಶಿ ವಿಜಯ್‌ ಗೋಖಲೆ ಅಮೆರಿಕ ಭೇಟಿಯಲ್ಲಿರುವ ಸಂದರ್ಭದಲ್ಲಿಯೇ ಬೋಲ್ಟನ್‌ ಖುರೇಷಿ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಂತೆಯೇ ವಿಜಯ್‌ ಗೋಖಲೆ ಅಮೆರಿಕ ಪ್ರವಾಸದ ಮೊದಲ ದಿನ, ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪಾಂಪಿಯೊ ಅವರನ್ನೂ ಭೇಟಿ ಮಾಡಿ ಚರ್ಚಿಸಿದ್ದಾರೆ. 

ಪಾಕಿಸ್ತಾನದ ಮೇಲೆ ಅಮೆರಿಕ ಒತ್ತಡ ಹೇರುವುದನ್ನು ಮುಂದುವರಿಸಲಿದೆ ಎಂದು ಅಮೆರಿಕ ಪ್ರಕಟಣೆಯಲ್ಲಿ ಹೇಳಿದ್ದು, ಪಾಕಿಸ್ತಾನ ನೆಲದಿಂದ ಕಾರ್ಯಾಚರಿಸುತ್ತಿರುವ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದು ಹಾಗೂ ಪುಲ್ವಾಮಾ ದಾಳಿಗೆ ಕಾರಣರಾದವರನ್ನು ಹೊರತರುವ ಪ್ರಾಮುಖ್ಯತೆಯನ್ನು ವಿಜಯ್‌ ಗೋಖಲೆ ಮತ್ತು ಪಾಂಪಿಯೊ ಚರ್ಚಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಉಪ ವಕ್ತಾರ ರಾಬರ್ಟ್‌ ಪಲಾಡಿನೊ ಹೇಳಿದ್ದಾರೆ.  ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತ ಸರ್ಕಾರ ಮತ್ತು ಜನರೊಂದಿಗೆ ಅಮೆರಿಕ ನಿಲ್ಲುತ್ತದೆ ಎಂದು ಪಾಂಪಿಯೊ ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.
Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp