ಮಸೂದ್ ಅಜರ್ 'ಜಾಗತಿಕ ಭಯೋತ್ಪಾದಕ' ಹಣೆಪಟ್ಟಿಗೆ ಚೀನಾ ಮತ್ತೆ ಅಡ್ಡಿ

ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಎಂದು ಘೋಷಿಸುವುದಕ್ಕೆ ಚೀನಾ ಮತ್ತೆ ಅಡ್ಡಿಪಡಿಸಿದೆ
ಮಸೂದ್ ಅಜರ್
ಮಸೂದ್ ಅಜರ್
ಬೀಜಿಂಗ್‌: ಪಾಕಿಸ್ತಾನ ಮೂಲದ ಜೈಶ್ ಇ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಭಯೋತ್ಪಾದನೆಂದು ಘೋಷಿಸುವುದಕ್ಕೆ ಚೀನಾ ಮತ್ತೆ ಅಡ್ಡಿಪಡಿಸಿದೆ.
ಮಸೂದ್ ಅಜರ್‌ನನ್ನು ಜಾಗತಿಕ ಭಯೋತ್ಪಾದನೆಂದು ಘೋಷಿಸುವ ಪ್ರಸ್ತಾವವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಂಗೀಕರಿಸುವ ಕೆಲವೇ ಗಂಟೆಗಳ ಮುನ್ನ ಚೀನಾ, ಎಲ್ಲರೂ ಒಪ್ಪಿಕೊಳ್ಳುವಂತಹ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಅದರಿಂದ ಸಮಸ್ಯೆ ಪರಿಹಾರವಾಗಬೇಕು ಎಂದು ಹೇಳುವ ಮೂಲಕ ಮತ್ತೆ ಕ್ಯಾತೆ ತೆಗೆದಿದೆ.
"ಚೀನಾ ಒಂದು ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದನ್ನು ಮುಂದುವರೆಸಲಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಭಾಗವಹಿಸಿ, ಜವಾಬ್ದಾರಿಯುತ ರೀತಿಯಲ್ಲಿ ಚರ್ಚೆಯಲ್ಲಿ ಪಾಲ್ಗೊಳ್ಳಲಿದೆ ” ಎಂದು ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ಲು ಕಾಂಗ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಉಗ್ರ ದಾಳಿ ಬಳಿಕ ಫ್ರಾನ್ಸ್‌ ಹೊಸದಾಗಿ ಅಜರ್‌ ವಿರುದ್ಧ ಪ್ರಸ್ತಾವ ಮಂಡಿಸಿತ್ತು. ಅಮೆರಿಕ ಮತ್ತು ಬ್ರಿಟನ್ ಕೂಡ ಈ ಪ್ರಸ್ತಾವವನ್ನು ಬೆಂಬಲಿಸಿದೆ. ಆದರೆ ಚೀನಾ ಮಾತ್ರ ಅಡ್ಡಗಾಲು ಹಾಕುತ್ತಿದೆ. 
ಮಾರ್ಚ್‌ 13ರಂದು ಸಂಜೆ 3 ಗಂಟೆಯೊಳಗೆ ಯಾವುದೇ ಆಕ್ಷೇಪ ವ್ಯಕ್ತವಾಗದಿದ್ದರೆ ಅಜರ್‌ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸಲಾಗುವುದು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿಷೇಧ ಸಮಿತಿ ಮುಖ್ಯಸ್ಥರು ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ. ಆದರೆ ಚೀನಾ ಮತ್ತೆ ಆಕ್ಷೇಪ ವ್ಯಕ್ತಪಡಿಸಿದೆ.
ಪುಲ್ವಾಮಾ ದಾಳಿಯ ನಂತರ, ಮಸೂದ್ ಅಜರ್‌ನನ್ನು ಜಾಗತಿಕ ಭಯೋತ್ಪಾದಕನೆಂದು ಘೋಷಿಸುವಂತೆ ವಿಶ್ವಸಂಸ್ಥೆಯ ಭದ್ರತಾ,ಮಂಡಳಿಗೆ ಮಂಡಳಿಯ ಶಾಶ್ವತ ಸದಸ್ಯ ರಾಷ್ಟ್ರಗಳಾದ ಅಮೆರಿಕ, ಫ್ರಾನ್ಸ್ ಮತ್ತು ಬ್ರಿಟನ್ ಹೊಸ ಪ್ರಸ್ತಾವನೆ ಸಲ್ಲಿಸಿವೆ. ಆದರೆ ಚೀನಾ ಈ ಕುರಿತು ಇನ್ನೂ ತನ್ನ ನಿರ್ಧಾರ ಹೊರಹಾಕಿಲ್ಲ.  ಆದರೆ ಇಂತಹ ನಿರ್ಧಾರವನ್ನು ಚೀನಾ ಈ ಹಿಂದೆ ಮೂರು ಬಾರಿ ನಿರ್ಬಂಧಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com