ನ್ಯೂಜಿಲೆಂಡ್ ಮಸೀದಿ ಮೇಲೆ ಗುಂಡಿನ ದಾಳಿ, ಸಾವಿನ ಸಂಖ್ಯೆ 49ಕ್ಕೆ ಏರಿಕೆ

ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಗರದ ಮಸೀದಿ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ ಎಂದು...

Published: 15th March 2019 12:00 PM  |   Last Updated: 15th March 2019 03:03 AM   |  A+A-


New Zealand mosque massacre: 49 worshippers killed by anti-immigration gunmen

ಘಟನಾ ಸ್ಥಳದಲ್ಲಿ ಭದ್ರತಾ ಸಿಬ್ಬಂದಿ

Posted By : LSB LSB
Source : The New Indian Express
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಕ್ರೈಸ್ಟ್ ಚರ್ಚ್ ನಗರದ ಮಸೀದಿ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ ಎಂದು ನ್ಯೂಜಿಲೆಂಡ್ ಪೊಲೀಸ್ ಆಯುಕ್ತ ಮೈಕ್ ಬುಷ್ ಅವರು ಖಚಿತಪಡಿಸಿದ್ದಾರೆ.

ದಕ್ಷಿಣ ಐಲೆಂಡ್ ಮತ್ತು ಕ್ರೈಸ್ಟ್ ಚರ್ಚ್ ನ ಎರಡು ಮಸೀದಿಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ 49 ಮಂದಿ ಮೃತಪಟ್ಟಿದ್ದಾರೆ ಎಂದು ಬುಷ್ ತಿಳಿಸಿದ್ದಾರೆ. ಅಲ್ಲದೆ ರಾತ್ರಿ 9 ಗಂಟೆಗೆ ಘಟನೆಯ ಪೂರ್ಣ ವಿವರ ನೀಡುವುದಾಗಿ ಹೇಳಿದ್ದಾರೆ.

ದಾಳಿಯಲ್ಲಿನ ಸಾವುನೋವಿನ ಬಗ್ಗೆ ನ್ಯೂಜಿಲೆಂಡ್ ಸರ್ಕಾರ ಅಧಿಕೃತ ಮಾಹಿತಿ ನೀಡಿದ್ದು, ಘಟನೆಯಲ್ಲಿ ಈ ವರೆಗೂ ಸತ್ತವರ ಸಂಖ್ಯೆ 49ಕ್ಕೆ ಏರಿಕೆಯಾಗಿದ್ದು, ಅಂತೆಯೇ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ನ್ಯೂಜಿಲೆಂಡ್ ಸರ್ಕಾರ ಆತಂಕ ವ್ಯಕ್ತಪಡಿಸಿದೆ.

ಆಸ್ಟ್ರೇಲಿಯಾ ಮೂಲದ ವ್ಯಕ್ತಿ ಈ ದಾಳಿ ನಡೆಸಿದ್ದಾನೆ. ಈತ ಸೇರಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಸೀದಿಗೆ ಪ್ರಾರ್ಥನೆಗೆ ಬಂದ ಸಂದರ್ಭದಲ್ಲಿ ಈ ವ್ಯಕ್ತಿ ಗುಂಡಿನ ದಾಳಿ ನಡೆಸಿದ್ದಾನೆ. ಈ ಕೃತ್ಯವೆಸಗುವುದಕ್ಕೋಸ್ಕರವೇ ಆತ ತರಬೇತಿ ಪಡೆದು ನ್ಯೂಜಿಲೆಂಡ್​ಗೆ ಬಂದಿದ್ದ.

ಹ್ಯಾಗ್ಲೆ ಪಾರ್ಕ್​ ಸಮೀಪ ಮಸೀದಿಯಲ್ಲಿ ಶೂಟೌಟ್ ನಡೆದಿದ್ದು, ಬಂದೂಕು ಧಾರಿಯೋರ್ವ ಆಟೋಮ್ಯಾಟಿಕ್ ಮಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದು, ಒಬ್ಬ ಗನ್ ಮ್ಯಾನ್ ಗುಂಡಿನ ದಾಳಿ ನಡೆಸುತ್ತಿರುವುದನ್ನು ಫೇಸ್ ಬುಕ್ ನಲ್ಲಿ ಲೈವ್ ಮಾಡಿದ್ದಾನೆ. ಈ ಭಯಾನಕ ವಿಡಿಯೋವನ್ನು ಫೇಸ್ ಬುಕ್ ತೆಗೆದು ಹಾಕಿದೆ.

ಮೂಲಗಳ ಪ್ರಕಾರ ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿದೆಯೇ ಎನ್ನುವ ಅನುಮಾನ ಕಾಡಿದೆ. ಹ್ಯಾಗ್ಲೆ ಪಾರ್ಕ್​ ಸಮೀಪ ಇದ್ದ ಮಸೀದಿ ಬಳಿ ಬಾಂಗ್ಲಾ ಕ್ರಿಕೆಟ್​ ತಂಡ ತೆರಳಿತ್ತು. ಗುಂಡಿನ ದಾಳಿ ನಡೆದ ನಂತರ ಎಲ್ಲ ಆಟಗಾರರು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಬಾಂಗ್ಲಾ ದೇಶದ ಪತ್ರಕರ್ತ ಮೊಹ್ಮದ್​ ಇಸ್ಲಾಮ್​ ಟ್ವೀಟ್ ಮಾಡಿದ್ದಾರೆ. 

ಈ ಮೂಲಕ ಬಾಂಗ್ಲಾ ಕ್ರಿಕೆಟ್​ ತಂಡ ಕೂದಲೆಳೆಯಲ್ಲಿ ಬಚಾವ್​ ಆಗಿ ಪ್ರಾಣ ಉಳಿಸಿಕೊಂಡಿದೆ. ದೇವರು ನಮ್ಮನ್ನು ರಕ್ಷಿಸಿದ್ದಾರೆ ಎಂದು ಆಟಗಾರರು ಟ್ವೀಟ್​ ಮಾಡಿಕೊಂಡಿದ್ದಾರೆ. ಅಲ್ಲದೆ ನಾಳೆ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶದ ನಡುವೆ ನಡೆಯಬೇಕಿದ್ದ 3ನೇ ಟೆಸ್ಟ್ ಪಂದ್ಯ ಕೂಡ ರದ್ದಾಗಿದೆ.
Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
facebook twitter whatsapp