ನ್ಯೂಜಿಲೆಂಡ್ ಮಸೀದಿ ಶೂಟಿಂಗ್: ಸಾವಿನ ಸಂಖ್ಯೆ 40ಕ್ಕೆ ಏರಿಕೆ, 20 ಮಂದಿ ಗಂಭೀರ

ನ್ಯೂಜಿಲೆಂಡ್ ನ ಹ್ಯಾಗ್ಲೆಯಲ್ಲಿನ ಮಸೀದಿ ಮೇಲಿನ ಶೂಟಿಂಗ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, 20ಕ್ಕೂ ಅಧಿಕ ಮಂದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನ್ಯೂಜಿಲೆಂಡ್ ಶೂಟಿಂಗ್
ನ್ಯೂಜಿಲೆಂಡ್ ಶೂಟಿಂಗ್
ವೆಲ್ಲಿಂಗ್ಟನ್: ನ್ಯೂಜಿಲೆಂಡ್ ನ ಹ್ಯಾಗ್ಲೆಯಲ್ಲಿನ ಮಸೀದಿ ಮೇಲಿನ ಶೂಟಿಂಗ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ದಾಳಿಯಲ್ಲಿನ ಸಾವುನೋವಿನ ಬಗ್ಗೆ ನ್ಯೂಜಿಲೆಂಡ್ ಸರ್ಕಾರ ಅಧಿಕೃತ ಮಾಹಿತಿ ನೀಡಿದ್ದು, ಘಟನೆಯಲ್ಲಿ ಈ ವರೆಗೂ ಸತ್ತವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಅಂತೆಯೇ 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ನ್ಯೂಜಿಲೆಂಡ್ ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಹ್ಯಾಗ್ಲೆ ಪಾರ್ಕ್​ ಸಮೀಪ ಮಸೀದಿಯಲ್ಲಿ ಶೂಟೌಟ್ ನಡೆದಿದ್ದು, ಬಂದೂಕು ಧಾರಿಯೋರ್ವ ಆಟೋಮ್ಯಾಟಿಕ್ ಮಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದ. ಮೂಲಗಳ ಪ್ರಕಾರ ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿದೆಯೇ ಎನ್ನುವ ಅನುಮಾನ ಕಾಡಿದೆ. ಹ್ಯಾಗ್ಲೆ ಪಾರ್ಕ್​ ಸಮೀಪ ಇದ್ದ ಮಸೀದಿ ಬಳಿ ಬಾಂಗ್ಲಾ ಕ್ರಿಕೆಟ್​ ತಂಡ ತೆರಳಿತ್ತು. ಗುಂಡಿನ ದಾಳಿ ನಡೆದ ನಂತರ ಎಲ್ಲ ಆಟಗಾರರು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ಬಾಂಗ್ಲಾ ದೇಶದ ಪತ್ರಕರ್ತ ಮೊಹ್ಮದ್​ ಇಸ್ಲಾಮ್​ ಟ್ವೀಟ್ ಮಾಡಿದ್ದಾರೆ. 
ಈ ಮೂಲಕ ಬಾಂಗ್ಲಾ ಕ್ರಿಕೆಟ್​ ತಂಡ ಕೂದಲೆಳೆಯಲ್ಲಿ ಬಚಾವ್​ ಆಗಿ ಪ್ರಾಣ ಉಳಿಸಿಕೊಂಡಿದೆ. ದೇವರು ನಮ್ಮನ್ನು ರಕ್ಷಿಸಿದ್ದಾರೆ ಎಂದು ಆಟಗಾರರು ಟ್ವೀಟ್​ ಮಾಡಿಕೊಂಡಿದ್ದಾರೆ. ಅಲ್ಲದೆ ನಾಳೆ ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶದ ನಡುವೆ ನಡೆಯಬೇಕಿದ್ದ 3ನೇ ಟೆಸ್ಟ್ ಪಂದ್ಯ ಕೂಡ ರದ್ದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com