ನ್ಯೂಜಿಲೆಂಡ್​ ಮಸೀದಿಯಲ್ಲಿ ಶೂಟೌಟ್, ಹಲವರ ಸಾವು

ನ್ಯೂಜಿಲೆಂಡ್​ನ ದಕ್ಷಿಣ ಐಸ್​ಲೆಂಡ್​ ನಗರದ ಮಸೀದಿಯಲ್ಲಿ ಶುಕ್ರವಾರ ಶೂಟೌಟ್​ ನಡೆದಿದ್ದು, ಈ ವೇಳೆ ಸ್ಥಳದಲ್ಲಿದ್ದ ಹಲವರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ವೆಲ್ಲಿಂಗ್ಟನ್​: ನ್ಯೂಜಿಲೆಂಡ್​ನ ದಕ್ಷಿಣ ಐಸ್​ಲೆಂಡ್​ ನಗರದ ಮಸೀದಿಯಲ್ಲಿ ಶುಕ್ರವಾರ ಶೂಟೌಟ್​ ನಡೆದಿದ್ದು, ಈ ವೇಳೆ ಸ್ಥಳದಲ್ಲಿದ್ದ ಹಲವರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಹ್ಯಾಗ್ಲೆ ಪಾರ್ಕ್​ ಸಮೀಪ ಮಸೀದಿಯಲ್ಲಿ ಶೂಟೌಟ್ ನಡೆದಿದ್ದು, ಬಂದೂಕು ಧಾರಿಯೋರ್ವ ಆಟೋಮ್ಯಾಟಿಕ್ ಮಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದಾನೆ. ಈ ವೇಳೆ ಮಸೀದಿ ಸಮೀಪ 6 ಜನರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಮಸೀದಿ ಸಮೀಪ ನಾಲ್ಕೈದು ಹೆಣಗಳು ಕಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗುತ್ತಿದೆ. ಇದೊಂದು ಭಯೋತ್ಪಾದನಾ ದಾಳಿ ಎನ್ನಲಾಗಿದೆ. ಆಸ್ಟ್ರೇಲಿಯಾ ಮೂಲದ ವ್ಯಕ್ತಿ ಈ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. 
ಘಟನಾ ಪ್ರದೇಶದಲ್ಲಿ ಗುಂಡಿನ ದಾಳಿ ಮುಂದುವರೆದಿದ್ದು, ಬಂದೂಕುದಾರಿಯನ್ನು ಜೀವಂತ ಹಿಡಿಯಲು ಅಥವಾ ಆತನನ್ನು ಹೊಡೆದುರುಳಿಸಲು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಸದ್ಯ ಪೊಲೀಸ್​ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಶೂಟೌಟ್​ ವೇಳೆ ಸಾಕಷ್ಟು ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಎಷ್ಟು ಜನ ಮೃತಪಟ್ಟಿದ್ದಾರೆ ಎನ್ನುವ ಬಗ್ಗೆ ಪೊಲೀಸರು ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ಪ್ರತ್ಯಕ್ಷದರ್ಶಿಗಳು  ದಾಳಿವೇಳೆ ಸಾಕಷ್ಟು ಜನರು ಮೃತಪಟ್ಟಿದ್ದಾರೆ ಎಂದು ಹೇಳಿಕೊಂಡಿದ್ದಾರೆ. “ಕಪ್ಪು ಬಟ್ಟೆ ಧರಿಸಿದ ವ್ಯಕ್ತಿಯೋರ್ವ ಗನ್​ ಹಿಡಿದುಕೊಂಡು ನಿಂತಿದ್ದ. ಸಾಕಷ್ಟು ಬಾರಿ ಗುಂಡಿನ ಮೊರೆತ ಕೇಳಿದೆ. ಸಾಕಷ್ಟು ಜನರು ಮೃತಪಟ್ಟ ಅನುಮಾನವಿದೆ,” ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com