ಲಾಹೋರ್ ಸೂಫಿ ಮಸೀದಿಯಲ್ಲಿ ಬಾಂಬ್ ಸ್ಫೋಟ, ಕನಿಷ್ಠ 4 ಸಾವು

ಪಾಕಿಸ್ತಾನದ ಲಾಹೋರ್ ನಲ್ಲಿ ಬುಧವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಡಾತಾ ದರ್ಬಾರ್ ಸೂಫಿ ಮಸೀದಿ (ಸಂಗ್ರಹ ಚಿತ್ರ)
ಡಾತಾ ದರ್ಬಾರ್ ಸೂಫಿ ಮಸೀದಿ (ಸಂಗ್ರಹ ಚಿತ್ರ)
ಲಾಹೋರ್: ಪಾಕಿಸ್ತಾನದ ಲಾಹೋರ್ ನಲ್ಲಿ ಬುಧವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಛ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪವಿತ್ರ ರಂಜಾನ್ ಉಪವಾಸ ಆರಂಭವಾದ ಮಾರನೆಯ ದಿನವೇ ಪಾಕಿಸ್ತಾನದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಲಾಹೋರ್ ನ ಡಾತಾ ದರ್ಬಾರ್ ಸೂಫಿ ಮಸೀದಿಯಲ್ಲಿ ಬಾಂಬ್ ಸ್ಫೋಟಿಸಿದ್ದಾರೆ. ಪರಿಣಾಮ ಸ್ಥಳದಲ್ಲೇ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. 
ಬಾಂಬ್ ಸ್ಫೋಟದ ರಭಸಕ್ಕೆ ಇಡೀ ಮಸಿದಿಯಲ್ಲಿ ಪೀಠೋಪಕರಣಗಳು ಚೆಲ್ಲಾಪಿಲ್ಲಿಯಾಗಿದ್ದು, ಮಸೀದಿ ಆವರಣದಲ್ಲಿ ನಿಲ್ಲಿಸಲಾಗಿದ್ದ ಪೊಲೀಸ್ ವಾಹನಗಳೂ ಕೂಡ ಛಿದ್ರವಾಗಿವೆ. 
ಈ ಬಗ್ಗೆ ಮಾಹಿತಿ ನೀಡಿರುವ ಲಾಹೋರ್ ಪೊಲೀಸ್ ಆಯುಕ್ತ ಘಝಂಫರ್ ಅಲಿ, ಸ್ಫೋಟ ಸಂಭವಿಸಿದ ಸಮಯದಲ್ಲಿ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿತ್ತು. ನೂರಾರು ಮಂದಿ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಸಾವುನೋವಿನ ಕುರಿತು ಇನ್ನಷ್ಟೇ ಅಧಿಕೃತ ಮಾಹಿತಿ ಲಭ್ಯವಾಗಬೇಕಿದೆ ಎಂದು ಹೇಳಿದ್ದಾರೆ.
ಡಾತಾ ದರ್ಬಾರ್ ಸೂಫಿ ಮಸೀದಿ ಲಾಹೋರ್ ನ ಖ್ಯಾತ ಪ್ರವಾಸಿ ತಾಣವಾಗಿದ್ದು, ಇಲ್ಲಿ ನಿತ್ಯ ನೂರಾರು ಪ್ರವಾಸಿಗರು ಆಗಮಿಸುತ್ತಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com