ಕ್ಸಿ ಜಿನ್‌ ಪಿಂಗ್‌- ಡೊನಾಲ್ಡ್ ಟ್ರಂಪ್ ಭೇಟಿ ಕುರಿತು ಮಾಹಿತಿ ಇಲ್ಲ: ಚೀನಾ

ಮುಂದಿನ ತಿಂಗಳು ಜಪಾನ್ ನಲ್ಲಿ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ಸಿ ಜಿನ್ ಪಿಂಗ್ ರನ್ನು ಭೇಟಿ ಮಾಡುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೀಜಿಂಗ್: ಮುಂದಿನ ತಿಂಗಳು ಜಪಾನ್ ನಲ್ಲಿ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ಸಿ ಜಿನ್ ಪಿಂಗ್ ರನ್ನು ಭೇಟಿ ಮಾಡುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ.
ಚೀನಾ ಮತ್ತು ಅಮೆರಿಕ ನಡುವಿನ ವಾಣಿಜ್ಯ ಸಮರ ತಾರಕಕ್ಕೇರಿರುವಂತೆಯೇ ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಜಪಾನ್ ನಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ತಾವು ರಷ್ಯಾ ಅದ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ರನ್ನು ಭೇಟಿ ಮಾಡಿ ಚರ್ಚೆ ಮಾಡುವುದಾಗಿ ಹೇಳಿದ್ದರು. ಅಂತೆಯೇ ಈ ಭೇಟಿ ಫಲಪ್ರದವಾಗುವ ವಿಶ್ವಾಸವಿದೆ ಎಂದಿರುವ ಟ್ರಂಪ್‌, ಸುಂಕ ಹೆಚ್ಚಳವನ್ನು ಸಮರ್ಥಿಸಿಕೊಂಡಿದ್ದರು.
ಇದೀಗ ಟ್ರಂಪ್ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಚೀನಾ ಮುಂದಿನ ತಿಂಗಳು ಜಪಾನ್ ನಲ್ಲಿ ನಡೆಯಲಿರುವ ಜಿ–20 ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕ್ಸಿ ಜಿನ್ ಪಿಂಗ್ ರನ್ನು ಭೇಟಿ ಮಾಡುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಮೆರಿಕ ಚರ್ಚೆಗೆ ಮುಂದಾದರೆ ನಾವು ಕೂಡ ಸ್ವಾಗತಿಸುತ್ತೇವೆ ಎಂದು ಹೇಳಿದೆ. ಆದರೆ ಟ್ರಂಪ್ ಮತ್ತು ಜಿನ್ ಪಿಂಗ್ ಭೇಟಿ ಕುರಿತು ಚೀನಾ ತನ್ನ ನಿಲುವು  ಸ್ಪಷ್ಟ ಪಡಿಸಿಲಿಲ್ಲ.
ಅಮೆರಿಕ ಮತ್ತು ಚೀನಾ ನಡುವೆ ವಾಣಿಜ್ಯ ಬಿಕ್ಕಟ್ಟು ತಲೆ ತೋರಿದ್ದು, ಉಭಯ ರಾಷ್ಟ್ರಗಳು ತೆರಿಗೆ ಹೆಚ್ಚಳದ ಜಟಾಪಟಿಯಲ್ಲಿ ತೊಡಗಿವೆ. ಇತ್ತೀಚೆಗಷ್ಟೇ ಚೀನಾ ಮೂಲದ ಸುಮಾರು 5 ಸಾವಿರಕ್ಕೂ ಅಧಿಕ ವಸ್ತುಗಳ ಮೇಲಿನ ತೆರಿಗೆಯನ್ನು ಏರಿಕೆ ಮಾಡುವ ಮೂಲಕ ಅಮೆರಿಕ ಚೀನಾ ಕೆಂಗಣ್ಣಿಗೆ ಗುರಿಯಾಗಿತ್ತು. ಇದಕ್ಕೆ ಪ್ರತಿಯಾಗಿ ಚೀನಾ ಕೂಡ ಅಮೆರಿಕ ಮೂಲದ ಸುಮಾರು 5 ಬಿಲಿಯನ್ ಡಾಲರ್ ಮೌಲ್ಯದ 4 ಸಾವಿರಕ್ಕೂ ಅಧಿಕ ವಸ್ತುಗಳ ಮೇಲಿನ ತೆರಿಗೆಯನ್ನು ಶೇ.25ರಷ್ಟು ಏರಿಕೆ ಮಾಡಿ ತಿರುಗೇಟು ನೀಡಿತ್ತು. 
ಇದೇ ಕಾರಣದಿಂದಾಗಿ ಜಪಾನ್‌ನಲ್ಲಿ ನಡೆಯಲಿರುವ ಟ್ರಂಪ್‌ ಮತ್ತು ಜಿನ್ ಪಿಂಗ್‌ ಭೇಟಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಕಳೆದ ನವೆಂಬರ್‌ನಲ್ಲಿ ಅರ್ಜೆಂಟಿನಾದ ಜಿ–20 ಶೃಂಗಸಭೆಯಲ್ಲಿಯೂ ಉಭಯ ನಾಯಕರ ನಡುವೆ ಪ್ರತ್ಯೇಕ ಭೇಟಿ ಏರ್ಪಟ್ಟಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com