ಮೋದಿಗೆ ದೂರವಾಣಿ ಕರೆ ಮಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್: ಇಲ್ಲಿದೆ ಮಾತುಕತೆಯ ವಿವರ

ಎರಡನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.

Published: 26th May 2019 12:00 PM  |   Last Updated: 26th May 2019 06:53 AM   |  A+A-


Imran Khan dials Modi, pushes for better ties between India and Pakistan

ಮೋದಿಗೆ ದೂರವಾಣಿ ಕರೆ ಮಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್: ಇಲ್ಲಿದೆ ಮಾತುಕತೆಯ ವಿವರ

Posted By : SBV SBV
Source : Online Desk
ಇಸ್ಲಾಮಾಬಾದ್: ಎರಡನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ನರೇಂದ್ರ ಮೋದಿಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. 

ಪಾಕಿಸ್ತಾನ ವಿದೇಶಾಂಗ ಸಚಿವಾಲಯ ಬಹಿರಂಗಪಡಿಸಿರುವ ಮಾಹಿತಿಯ ಪ್ರಕಾರ, ಮೋದಿಯೊಂದಿಗೆ ಮಾತುಕತೆ ನಡೆಸಿರುವ ಇಮ್ರಾನ್ ಖಾನ್, ಉಭಯ ರಾಷ್ಟ್ರಗಳ ಜನತೆಯ ಒಳಿತಿಗಾಗಿ ಒಟ್ಟಿಗೆ ಕೆಲಸ ಮಾಡುವ ಇಂಗಿತವನ್ನು ಖಾನ್ ಈ ವೇಳೆ ವ್ಯಕ್ತಪಡಿಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಚುನಾವಣೆ ಫಲಿತಾಂಶ ಬಂದ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಇಮ್ರಾನ್ ಖಾನ್ ಮೋದಿಗೆ ಅಭಿನಂದನೆ ಸಲ್ಲಿಸಿದ್ದರು. 
Stay up to date on all the latest ಅಂತಾರಾಷ್ಟ್ರೀಯ news with The Kannadaprabha App. Download now
facebook twitter whatsapp