ಅಜಿತ್ ಪವಾರ್ ನಿರ್ಧಾರ ವೈಯಕ್ತಿಕ, ಅದನ್ನು ಒಪ್ಪುವುದಿಲ್ಲ: ಶರದ್ ಪವಾರ್ 

ರಾತ್ರೋರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಬಿಜೆಪಿಗೆ ಬೆಂಬಲ ನೀಡಿ ಶನಿವಾರ ಬೆಳಗ್ಗೆ ರಾಜಭವನದಲ್ಲಿ ನಡೆದ ತರಾತುರಿಯ ಕಾರ್ಯಕ್ರಮದಲ್ಲಿ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಶರದ್ ಪವಾರ್
ಶರದ್ ಪವಾರ್

ನವದೆಹಲಿ: ರಾತ್ರೋರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಬಿಜೆಪಿಗೆ ಬೆಂಬಲ ನೀಡಿ ಶನಿವಾರ ಬೆಳಗ್ಗೆ ರಾಜಭವನದಲ್ಲಿ ನಡೆದ ತರಾತುರಿಯ ಕಾರ್ಯಕ್ರಮದಲ್ಲಿ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.


ಇಷ್ಟೆಲ್ಲಾ ನಡೆದಿದ್ದು ಎನ್ ಸಿಪಿ ನಾಯಕ ಶರದ್ ಪವಾರ್ ಅವರಿಗೆ ಗೊತ್ತಿಲ್ಲದೆ ಅಜಿತ್ ಪವಾರ್ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರ ಎಂದು ಹೇಳಲಾಗುತ್ತಿತ್ತು. ಇದಕ್ಕೆ ಮಾಧ್ಯಮಗಳು ಸಂಪರ್ಕಿಸಿದಾಗ ಪ್ರತಿಕ್ರಿಯೆ ನೀಡಿದ ಶರದ್ ಪವಾರ್, ಬಿಜೆಪಿಗೆ ಬೆಂಬಲ ನೀಡಿ ಸರ್ಕಾರ ರಚಿಸಿದ್ದು ಅಜಿತ್ ಪವಾರ್ ಅವರ ವೈಯಕ್ತಿಕ ನಿರ್ಧಾರವೇ ಹೊರತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯದ್ದಲ್ಲ. ನಾವು ಈ ನಿರ್ಧಾರವನ್ನು ಬೆಂಬಲಿಸುವುದಿಲ್ಲ ಮತ್ತು ಅನುಮೋದಿಸುವುದೂ ಇಲ್ಲ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com