ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಆಹ್ವಾನ: ಇಮ್ರಾನ್ ಖಾನ್ ಗೂಗ್ಲಿ ಬಗ್ಗು ಬಡಿದ ಮನಮೋಹನ್ ಸಿಂಗ್

ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಿ ಭಾರತಕ್ಕೆ ಮುಜುಗರ ಉಂಟು ಮಾಡಲು ಯತ್ನಿಸಿದ್ದ ಪಾಕಿಸ್ತಾನಕ್ಕೆ ಮನಮೋಹನ್ ಸಿಂಗ್ ಖಡಕ್ ತಿರಗೇಟು ನೀಡಿದ್ದು, ಪಾಕಿಸ್ತಾನ ಸರ್ಕಾರದ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪಾಕಿಸ್ತಾನದ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್

ನವದೆಹಲಿ: ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಿ ಭಾರತಕ್ಕೆ ಮುಜುಗರ ಉಂಟು ಮಾಡಲು ಯತ್ನಿಸಿದ್ದ ಪಾಕಿಸ್ತಾನಕ್ಕೆ ಮನಮೋಹನ್ ಸಿಂಗ್ ಖಡಕ್ ತಿರಗೇಟು ನೀಡಿದ್ದು, ಪಾಕಿಸ್ತಾನ ಸರ್ಕಾರದ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದಾರೆ.

ಪಾಕಿಸ್ತಾನದ ಕರ್ತಾರ್‌ಪುರ ಕಾರಿಡಾರ್ ಉದ್ಘಾಟನೆಗಾಗಿ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಆಹ್ವಾನವನ್ನು ನೀಡಲು ಪಾಕಿಸ್ತಾನ ನಿರ್ಧರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಮಹಮೂದ್ ಖುರೇಷಿ ಸೋಮವಾರ ಹೇಳಿದ್ದರು. ಅಲ್ಲದೆ ಈ ಕುರಿತಂತೆ ಮಾಧ್ಯಮಗಳ ಮೂಲಕ ಖುರೇಷಿ ಆಹ್ವಾನ ನೀಡಿದ್ದರು. ಆದರೆ ಈ ಆಹ್ವಾನವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಯವಾಗಿ ತಿರಸ್ಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಮನಮೋಹನ್ ಸಿಂಗ್ ಅವರ ಕಚೇರಿ ಸ್ಪಷ್ಟನೆ ನೀಡಿದ್ದು, ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ತಮಗೆ ಈ ವರೆಗೂ ಅಧಿಕೃತ ಆಹ್ವಾನ ಬಂದಿಲ್ಲ. ಈ ಕುರಿಂತೆ ಪಾಕಿಸ್ತಾನ ಸರ್ಕಾರದಿಂದ ಯಾರೂ ಕೂಡ ತಮ್ಮನ್ನು ಸಂಪರ್ಕಿಸಿಲ್ಲ. ಅಲ್ಲದೆ ಈ ಕುರಿತಂತೆ ಮನಮೋಹನ್ ಸಿಂಗ್ ಅವರಾಗಲೀ ಅಥವಾ ಅವರ ಕಾರ್ಯಾಲಯದೊಂದಿಗೆ ಯಾರೂ ಮೌಖಿಕವಾಗಿಯೂ ಮಾತನಾಡಿಲ್ಲ. ಒಂದು ವೇಳೆ ಅಂತಹ ಮೌಖಿಕ ಆಹ್ವಾನ ಬಂದರೂ, ಈ ಕುರಿತಂತೆ ಶಿಷ್ಟಾಚಾರದಂತೆ ಕೇಂದ್ರ ವಿದೇಶಾಂಗ ಇಲಾಖೆ ಮಾಹಿತಿ ನೀಡುತ್ತದೆ. ಅಲ್ಲದೆ ವಿದೇಶಾಂಗ ಇಲಾಖೆಯ ಅನುಮತಿ ದೊರೆತ ಬಳಿಕವಷ್ಚೇ ಈ ಕುರಿತು ನಿರ್ಣಯ ಕೈಗೊಳ್ಳಲಾಗುತ್ತದೆ ಮನಮೋಹನ್ ಸಿಂಗ್ ಅವರ ಕಾರ್ಯಾಲಯ ಸ್ಪಷ್ಟಪಡಿಸಿದೆ.

ಇನ್ನು ಈ ಹಿಂದೆ ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅವರು ಅಧಿಕಾರ ಸ್ವೀಕರಿಸುವಾಗ ನವಜೋತ್ ಸಿಂಗ್ ಸಿಧು ಅವರನ್ನು ಆಹ್ವಾನಿಸಿತ್ತು. ಸಿಧು ಅಧಿಕಾರ ಸ್ವೀಕಾರ ಕಾರ್ಯಕ್ರಮಕ್ಕೆ ತೆರಳಿದ್ದರಾದರೂ ಬಳಿಕ ಭಾರತದಲ್ಲಿ ತೀವ್ರ ವಿರೋಧ ಎದುರಿಸಿದ್ದರು. ಆದರೆ ಇದೇ ಪ್ರಮಾದವನ್ನು ಮನಮೋಹನ್ ಸಿಂಗ್ ಮಾಡದೇ ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com